ನವದೆಹಲಿ: ಇವಿಎಂ ಯಂತ್ರಗಳ ಮತಗಳ ಮರು ಪರಿಶೀಲನೆಗೆ ನೆರವಾಗುವ ವಿವಿ ಪ್ಯಾಟ್ ಯಂತ್ರಗಳ ಕುರಿತಾಗಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ವಿರೋಧ ಪಕ್ಷಗಳ ಮೈತ್ರಿ ಕೂಟವಾದ ಇಂಡಿ ಮೈತ್ರಿ ಕೂಟಕ್ಕೆ ಭಾರೀ ಹಿನ್ನಡೆ ಉಂಟು ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಸಮಾವೇಶ ನಡೆಸುತ್ತಿದ್ದ ವೇಳೆ ಮಾತನಾಡಿದ ಪ್ರಧಾನಿ ಮೋದಿ, ವಿರೋಧ ಪಕ್ಷಗಳು ಇವಿಎಂ ಯಂತ್ರಗಳ ವಿಚಾರದಲ್ಲಿ ಜನರ ಮನಸ್ಸಿನಲ್ಲಿ ಸಂಶಯದ ವಿಷ ಬೀಜ ಬಿತ್ತಲು ಯತ್ನಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
Post Office Jobs: ಅಂಚೆ ಇಲಾಖೆಯಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ.! 10th ಪಾಸಾಗಿದ್ರೆ ಸಾಕು – ಇಂದೇ ಅರ್ಜಿ ಸಲ್ಲಿಸಿ
ಇಂದು ಇಡೀ ವಿಶ್ವವೇ ಭಾರತದ ಪ್ರಜಾಪ್ರಭುತ್ವವನ್ನು ಹಾಡಿ ಹೊಗಳುತ್ತಿದೆ. ಭಾರತ ದೇಶದ ಚುನಾವಣಾ ಪ್ರಕ್ರಿಯೆ, ಚುನಾವಣೆಗಳಲ್ಲಿ ತಂತ್ರಜ್ಞಾನವನ್ನು ಬಳಸುವ ರೀತಿ ಎಲ್ಲವನ್ನೂ ಇಡೀ ವಿಶ್ವವೇ ಕೊಂಡಾಡುತ್ತಿದೆ. ಆದರೆ, ವಿರೋಧ ಪಕ್ಷಗಳ ನಾಯಕರು ಮಾತ್ರ ತಮ್ಮ ವೈಯಕ್ತಿಕ ಹಿತಾಸಕ್ತಿಯಿಂದ ಇವಿಎಂ ಯಂತ್ರಗಳ ವಿರುದ್ಧ ದೂಷಣೆ ಮಾಡೋದ್ರಲ್ಲಿ ನಿರತರಾಗಿದ್ದಾರೆ ಎಂದು ಪ್ರಧಾನಿ ಮೋದಿ ಕಿಡಿ ಕಾರಿದರು.