ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಎಲಿಮಿನೇಟರ್ ಪಂದ್ಯ ನಡೆಯಲಿದೆ.
ಹರ್ಮನ್ಪ್ರೀತ್ ಕೌರ್ ನೇತೃತ್ವದ ಮುಂಬೈ ತಂಡವು ಈ ಸೀಸನ್ನಲ್ಲಿ ಎರಡನೇ ಸ್ಥಾನ ಗಳಿಸಿದರೆ ಆರ್ಸಿಬಿ ಮೂರನೇ ಸ್ಥಾನ ಗಳಿಸಿತು. ಬುಧವಾರ ಸಂಜೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಜೈಂಟ್ಸ್ ನಡುವೆ ನಡೆದ ಪಂದ್ಯದಲ್ಲಿ ಮೆಗ್ ಲ್ಯಾನಿಂಗ್ ನೇತೃತ್ವದ ಡೆಲ್ಲಿ ತಂಡ ಮತ್ತೊಮ್ಮೆ ಗೆದ್ದು ಫೈನಲ್ ತಲುಪಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ಕಳೆದ ಸೀಸನ್ನಲ್ಲಿಯೂ ಡೆಲ್ಲಿ ಮೊದಲು ಫೈನಲ್ಗೆ ಲಗ್ಗೆ ಇಟ್ಟಿತ್ತು. ಆದರೆ ಫೈನಲ್ನಲ್ಲಿ ಮುಂಬೈ ಎದುರು ಸೋಲನುಭವಿಸಬೇಕಾಯಿತು.
ಇನ್ನು ಇದೇ ಶುಕ್ರವಾರ (ಮಾರ್ಚ್ 15) ಮುಂಬೈ ಇಂಡಿಯನ್ಸ್ ಮತ್ತು ಆರ್ಸಿಬಿ ನಡುವೆ ಎರಡನೇ ಫೈನಲಿಸ್ಟ್ ಆಗಲು ತೀವ್ರ ಪೈಪೋಟಿ ನಡೆಯಲಿದೆ. ಮಂಧಾನ ತಂಡ ಈ ಸೀಸನ್ನಲ್ಲಿ ಒಟ್ಟು ಎಂಟು ಪಂದ್ಯಗಳನ್ನು ಆಡಿದ್ದು, ಅದರಲ್ಲಿ ನಾಲ್ಕರಲ್ಲಿ ಗೆಲುವಿನ ರುಚಿ ಕಂಡಿದೆ. ಅದೇ ಸಮಯದಲ್ಲಿ ಮುಂಬೈ ಎಂಟು ಪಂದ್ಯಗಳಲ್ಲಿ ಐದರಲ್ಲಿ ಗೆಲುವು ಸಾಧಿಸಿದೆ. ಈ ಸೀಸನ್ನಲ್ಲಿ ಎರಡು ತಂಡಗಳು ಎರಡು ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಒಂದು ಪಂದ್ಯವನ್ನು ಹರ್ಮನ್ಪ್ರೀತ್ ಕೌರ್ ತಂಡ ಗೆದ್ದುಕೊಂಡಿದ್ದರೆ, ಇನ್ನೊಂದು ಪಂದ್ಯವನ್ನು ಆರ್ಸಿಬಿ ಗೆದ್ದಿದೆ. ಅದೇ ಸಮಯದಲ್ಲಿ, ಕಳೆದ ಸೀಸನ್ನಲ್ಲಿಯೂ ಎರಡು ತಂಡಗಳ ನಡುವೆ ಎರಡು ಲೀಗ್ ಪಂದ್ಯಗಳು ನಡೆದಿದ್ದು ಅದರಲ್ಲಿ ಮುಂಬೈ ಎರಡೂ ಪಂದ್ಯಗಳನ್ನು ಗೆದ್ದಿದೆ. ಇಂತಹ ಪರಿಸ್ಥಿತಿಯಲ್ಲಿ ನೋಡಿದರೆ ಮುಂಬೈ, ಆರ್ಸಿಬಿ ವಿರುದ್ಧ ಮೇಲುಗೈ ಸಾಧಿಸಿದೆ ಎಂಬುದು ಸ್ಪಷ್ಟವಾಗುತ್ತದೆ.