ಹಾವೇರಿ: ಮಹಿಳೆ ಬೆತ್ತಲೆ ಆಗಿಲ್ಲ, ಇಡೀ ಕಾಂಗ್ರೆಸ್ ಸರ್ಕಾರವೇ ಬೆತ್ತಲೆ ಆಗಿದೆ ಎಂದು ಮಾಜಿ ಸಚಿವ ಬಿಸಿ ಪಾಟೀಲ್ ಹೇಳಿದರು. ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ನಗರದಲ್ಲಿ ಪ್ರತಿಭಟನೆ ಮಾಡಲಾಗಿದೆ. ಈ ವೇಳೆ ಮಾತನಾಡಿದ ಮಾಜಿ ಸಚಿವ ಬಿಸಿ ಪಾಟೀಲ್ , ಮಹಿಳೆ ಬೆತ್ತಲೆ ಆಗಿಲ್ಲ, ಇಡೀ ಕಾಂಗ್ರೆಸ್ ಸರ್ಕಾರವೇ ಬೆತ್ತಲೆ ಆಗಿದೆ. ಕಾನೂನು ಸುವ್ಯವಸ್ಥೆ ಎಲ್ಲಿದೆ? ಪೊಲೀಸ್ ಇಲಾಖೆ ಏನು ಕೆಲಸ ಮಾಡುತ್ತಿದೆ? ಇಂದು ವಿಚಾರ ಮಾಡಬೇಕಿದೆ. ಕಾಂಗ್ರೆಸ್ ಭ್ರಷ್ಟ ಹಾಗೂ ಅದಕ್ಷ ಸರ್ಕಾರ ಎಂದು ವಾಗ್ದಾಳಿ ಮಾಡಿದ್ದಾರೆ.
DK Shivkumar: ಪ್ರತಾಪ್ ಸಿಂಹರನ್ನು ಟ್ರ್ಯಾಪ್ ಮಾಡಲಾಗ್ತಿದೆ ಆರೋಪಕ್ಕೆ ಡಿಕೆಶಿ ಹೇಳಿದ್ದೇನು?
ಭ್ರೂಣ ಹತ್ಯೆ ಆದರೂ ಕ್ರಮ ತಗೊಳ್ಳುತ್ತಿಲ್ಲ. ಮಹಿಳೆಯರ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಆಗುತ್ತಿದೆ. ಆದರೂ ಈ ಸರ್ಕಾರ ಕಠಿಣ ಕ್ರಮ ಕೈಗೊಂಡಿಲ್ಲ. ಕಾಂಗ್ರೆಸ್ ಯಾವುದಕ್ಕೂ ತಲೆ ಕೆಡಿಸಿಕೊಳ್ಳುತ್ತಿಲ್ಲ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು, ಸಚಿವರು ಹಣ ಮಾಡುವುದರಲ್ಲಿ ಪೈಪೋಟಿಗಿಳಿದಿದ್ದಾರೆ. ಅವರವರಲ್ಲೇ ದುಡ್ಡು ಮಾಡುವುದರಲ್ಲಿ ಕಾಂಪಿಟೇಶನ್ ನಡೆದಿದೆ. ಅಭಿವೃದ್ಧಿಯಂತೂ ರಾಜ್ಯದಲ್ಲಿ ಶೂನ್ಯವಾಗಿದೆ. ಇಂಥ ಸರ್ಕಾರಕ್ಕೆ ಧಿಕ್ಕಾರ ಕೂಗಿ ಪ್ರತಿಭಟನೆ ಮಾಡಿದ್ದೇವೆ ಎಂದು ಕಿಡಿಕಾರಿದ್ದಾರೆ.