ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಕಚೇರಿಯಲ್ಲಿ ಕಳ್ಳತನ!

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಕಚೇರಿಯಲ್ಲಿ ಕಳ್ಳರು ಕೈಚಳಕ ತೋರಿಸಿದ್ದಾರೆ. ಹಿರೋಯಿನ್ ಗಳ‌ ಹೆಸರನ್ನು ಬಿಡದ ಸೈಬರ್ ಚೋರರು! ಹೇಗೆಲ್ಲಾ ಮೋಸ ಮಾಡ್ತಾರೆ ನೋಡಿ! ಜೆ.ಸಿ.ನಗರದ ಟೌನ್​ಹಾಲ್ ಕಟ್ಟಡದಲ್ಲಿರುವ ಶಾಸಕರ ಕಚೇರಿಯಲ್ಲಿನ ಟಿವಿವನ್ನು ಕಳ್ಳತನ ಮಾಡಿಕೊಂಡು ಖದೀಮರು ಪರಾರಿಯಾಗಿದ್ದಾರೆ. ಸರ್ಕಾರಿ ರಜೆ ದಿನವಾದ ರವಿವಾರದಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹುಬ್ಬಳ್ಳಿಯ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.