ಗದಗ: ಕರ್ನಾಟಕ ರಾಜ್ಯದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಹವಾಮಾನ ವರದಿ ಪ್ರಕಾರ ಹಿಂಗಾರು ಮಳೆ ಕೊರತೆಯೂ ಬಹಳಷ್ಟಿದೆ. ರಾಜ್ಯದಲ್ಲಿ ಮಳೆ ಪರಿಸ್ಥಿತಿ ಗಂಭೀರ ಇದೆ. ಬೇಸಿಗೆಯಲ್ಲಿ ಕುಡಿಯುವ ನೀರಿ ಸಮಸ್ಯೆ ಸಾಧ್ಯತೆ ಇದೆ ಎಂದು ಸಚಿವ ಹೆಚ್ಕೆ ಪಾಟೀಲ್ (H.K.Patil) ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಮೇವು, ನೀರಿನ ಕೊರತೆ ಆಗದಂತೆ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಗದಗದಲ್ಲಿ ಮಾತನಾಡಿದ ಅವರು, ಮುಂದಿನ ಜೂನ್, ಜುಲೈ ವರೆಗೂ ಮಳೆ ಬರುವ ಲಕ್ಷಣಗಳು ಕಡಿಮೆ ಇದೆ. ವಾಡಿಕೆ ಮಳೆಗಿಂತ ಬಹಳ ಕೊರತೆ ಇದೆ. ಹೀಗಾಗಿ ಕುಡಿಯುವ ಕೊರತೆ ಸಾಧ್ಯತೆ ಇದೆ. ಸಾರ್ವಜನಿಕರು ನೀರಿನ ಬಳಕ ವಿಚಾರ ಮಾಡಿ ಬಳಕೆ ಮಾಡಬೇಕಾದ ಮಾನಸಿಕ ಸ್ಥಿತಿಗೆ ಬರಬೇಕಿದೆ. ನೀರು ಇದ್ದರೆ ಹೇಗೆ ಬೇಕಾದರೂ ಬಳಕೆ ಮಾಡುತ್ತೇವೆ. ಆದರೆ ನೀರಿನ ಕೊರತೆ ಆಗುವ ಸಾಧ್ಯತೆ ಇರುವುದರಿಂದ ಎಲ್ಲರೂ ಮುಂಜಾಗ್ರತೆಯಿಂದ ಇರಬೇಕು ಎಂದರು.
ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ.. ಇಲ್ಲಿದೆ ಉಚಿತ ಸಲಹೆ ಸರಳ ಚಿಕಿತ್ಸೆ- ಪರಿಹಾರ
ನೀರು ಹಾಳು ಮಾಡದೇ ಮಿತವಾಗಿ ಬಳಸಬೇಕು ಅಂತ ಜಿಲ್ಲೆಯ ಜನರಿಗೆ ಮನವಿ ಮಾಡಿದ ಹೆಚ್ಕೆ ಪಾಟೀಲ್, ಗದಗ ಜಿಲ್ಲೆಯಲ್ಲಿ ಭೀಕರ ಬರ ಹಿನ್ನೆಲೆ ಮೇವು, ನೀರಿನ ಕೊರತೆ ಆಗದಂತೆ ಎಚ್ಚರಿಕೆ ವಹಿಸುವಂತ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮೇವು ಬ್ಯಾಂಕ್ ತೆರೆಯಲು ಸೂಚಿಸಿದರು.