ಬೆಂಗಳೂರು:- ನಗರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನಿಮ್ಹಾನ್ಸ್ ನಿಂದ ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು 34 ನ್ಯೂರೋಲಜಿಸ್ಟ್ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ನವೆಂಬರ್ 20, 2023 ಅಂದರೆ ನಾಳೆ ಬೆಳಗ್ಗೆ 10 ಗಂಟೆಗೆ ಬೆಂಗಳೂರಿನಲ್ಲಿ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ವಿದ್ಯಾರ್ಹತೆ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಬಿಬಿಎಸ್, ಎಂಡಿ, ಡಿಎಮ್, ಡಿಎನ್ಬಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 60 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಮಾಸಿಕ ₹ 75,000-1,50,000
ಉದ್ಯೋಗದ ಸ್ಥಳ:
ಕರ್ನಾಟಕ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸ್ಕಿಲ್ ಟೆಸ್ಟ್