ನವದೆಹಲಿ:- ನನ್ನನ್ನು ಜೈಲಿಗೆ ಕಳುಹಿಸಲು ಸರ್ಕಾರದಿಂದ ಸಂಚು ನಡೆದಿದೆ ಎಂದು HD ಕುಮಾರಸ್ವಾಮಿ ಹೇಳಿದ್ದಾರೆ.
ಹಿರಿಯ ನಾಗರಿಕರ ಮಾಸಾಶನ ಹೆಚ್ಚಳಕ್ಕೆ ಶೀಘ್ರವೇ ಕ್ರಮ: ಲಕ್ಷ್ಮಿ ಹೆಬ್ಬಾಳ್ಕರ್!
ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಒಬ್ಬ ಅಧಿಕಾರಿಯ ಕರ್ಮಕಾಂಡದ ಬಗ್ಗೆ ಮಾತಾಡಿದ್ದೆ. ಮಾಧ್ಯಮಗಳ ಮುಂದೆ ಅವರ ಕಥೆಯನ್ನು ಬಯಲು ಮಾಡಿದ್ದೆ. ಆದರೆ, ಅವರು ನನ್ನನ್ನ ಜೈಲಿಗೆ ಕಳಿಸುವ ತಿರುಕನ ಕನಸು ಕಾಣುತ್ತಿದ್ದಾರೆ. ಅವರು ಎಲ್ಲಿ ಯಾರ ಚೇಂಬರ್ ನಲ್ಲಿ ಕುಳಿತು ಮಾತಾಡಿದ್ದಾರೆ ಎನ್ನುವ ಮಾಹಿತಿ ನನಗೆ ಇದೆ. ಒಂದು ದಿನವಾದರೂ ಕುಮಾರಸ್ವಾಮಿಯನ್ನು ಜೈಲಿಗೆ ಹಾಕಬೇಕು ಕಳಿಸಬೇಕೆಂದು ಚರ್ಚೆ ಮಾಡಲಾಗಿದೆ ಆರೋಪ ಮಾಡಿದರು.
ನಾನು ಜಾಮೀನು ತೆಗೆದುಕೊಂಡಿದ್ದೇನೆ. ಅದಕ್ಕೆ ಕಾನೂನಿನಲ್ಲಿ ಅವಕಾಶವಿದೆ. ಆದರೆ ಈ ಸರ್ಕಾರದ ಕೆಟ್ಟ ಅಧಿಕಾರಿಗಳು ಏನು ಬೇಕಾದರೂ ಮಾಡುತ್ತಾರೆ ಎಂದು ನನ್ನ ವಕೀಲರು ಜಾಮೀನು ಪಡೆದುಕೊಳ್ಳಬೇಕು ಎಂದು ಹೇಳಿದ್ದರು. ಅದಕ್ಕೆ ಜಾಮೀನು ಪಡೆದಿದ್ದೇನೆ ಎಂದು ಅವರು ಹೇಳಿದರು.
ಕಳೆದ 3-4 ತಿಂಗಳಿಂದ ರಾಜ್ಯದಲ್ಲಿ ಏನೆಲ್ಲಾ ನಡೆಯುತ್ತಿದೆ ಎನ್ನುವುದು ನನಗೆ ಗೊತ್ತಿದೆ. 80 ಕೋಟಿ ರೂ. ಗುಳುಂ ಮಾಡಿರೋ ಪ್ರಕರಣದಲ್ಲಿ ಏನಾಯಿತು? ಎಸ್ಐಟಿ ಯಾರನ್ನೋ ಬಂಧನ ಮಾಡಿದ್ದರು. ಯಾರೋ ಸಂಬಂಧವಿಲ್ಲದ ವ್ಯಕ್ತಿಯ ಹೆಸರನ್ನು ಪ್ರಕರಣದಲ್ಲಿ ಸೇರಿಸಿದಿರಿ. ನಾನು ಯಾವುದೇ ಅಧಿಕಾರಿಯನ್ನು ವೈಯಕ್ತಿಕವಾಗಿ ಬಳಸಿಕೊಂಡಿಲ್ಲ. ನಾನು ಆ ಅಧಿಕಾರಿಯನ್ನು ಪ್ರಶ್ನೆ ಮಾಡಿದ್ದು ನನ್ನ ಕೇಸ್ ಬಗ್ಗೆ ಅಲ್ಲ. ರಾಜ್ಯಪಾಲರ ಕಚೇರಿ ತನಿಖೆ ಮಾಡುವುದಕ್ಕೆ ಅವಕಾಶ ಕೇಳಿ ಪತ್ರ ಬರೆದು, ಒಂದು ಖಾಸಗಿ ಚಾನೆಲ್ಗೆ ಲೀಕ್ ಮಾಡಿರುವ ಹಿನ್ನೆಲೆಯಲ್ಲಿ ನಾನು ಪ್ರಶ್ನೆ ಮಾಡಿದ್ದು ಎಂದು ಅವರು ಹೇಳಿದರು.