ನವದೆಹಲಿ:- ʻದೈಹಿಕ ಸಂಬಂಧʼ ಅಂದ್ರೆ ಲೈಂಗಿಕ ದೌರ್ಜನ್ಯ ಎಂದರ್ಥವಲ್ಲ ಎಂದು ಹೇಳುವ ಮೂಲಕ ಪೋಕ್ಸೋ ಕೇಸ್ ಆರೋಪಿಯನ್ನು ದೆಹಲಿ ಹೈಕೋರ್ಟ್ ಖುಲಾಸೆಗೊಳಿಸಿದೆ.
Hubballi: ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ!
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪ್ರತಿಬಾ ಎಂ ಸಿಂಗ್ ಮತ್ತು ಅಮಿತ್ ಶರ್ಮಾ ಅವರಿದ್ದ ಪೀಠವು, ಸಂತ್ರಸ್ತೆಯ ಹೇಳಿಕೆ ಲೈಂಗಿಕ ಸಂಭೋಗ ಅಥವಾ ಲೈಂಗಿಕ ದೌರ್ಜನ್ಯವನ್ನು ಸೂಚಿಸುತ್ತಿಲ್ಲ ಎಂದು ಹೇಳಿದೆ
ಸಂತ್ರಸ್ತೆ ವಾಸ್ತವವಾಗಿ ದೈಹಿಕ ಸಂಬಂಧ ಎಂಬ ಪದಗುಚ್ಛ ಬಳಸಿದ್ದು, ಈ ಪದವನ್ನು ಆಕೆ ಹೇಗೆ ಅರ್ಥೈಸಿದ್ದಾಳೆ ಎಂಬುದರ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ಪೋಕ್ಸೋ ಕಾಯ್ದೆಯ ಸೆಕ್ಷನ್-3 ಅಥವಾ ಐಪಿಸಿ ಸೆಕ್ಷನ್ 376ರ ಅಡಿಯಲ್ಲಿ ಅಪರಾಧ ಸಾಬೀತಾಗಲು ʻಸಂಬಂಧ ಏರ್ಪಟ್ಟಿತ್ತುʼ ಎಂಬ ಪದ ಬಳಕೆ ಸಾಲದು. ಪೋಕ್ಸೋ ಕಾಯ್ದೆ ಅಡಿಯಲ್ಲಿ ಬಾಲಕಿ ಅಪ್ರಾಪ್ತ ವಯಸ್ಕಳಾಗಿದ್ದರೆ ಒಪ್ಪಿಗೆ ಅಪ್ರಸ್ತುತವಾಗಿದ್ದರೂ ಲೈಂಗಿಕ ದೌರ್ಜನ್ಯ ನಡೆಯದೇ ಇರುವಾಗ ದೈಹಿಕ ಸಂಬಂಧ ಎಂಬ ಪದಗುಚ್ಛವನ್ನು ಲೈಂಗಿಕ ಸಂಭೋಗ ಎಂದು ತನ್ನಿಂತಾನೇ ಪರಿವರ್ತಿಸಲಾಗದು ಎಂದು ಕೋರ್ಟ್ ವಿವರಿಸಿದೆ.