ಹುಬ್ಬಳ್ಳಿ:- ಸರ್ಕಾರ ಅಸ್ಥಿರಗೊಳಿಸುವ ಯಾವುದೇ ಪ್ರಯತ್ನ ಬಿಜೆಪಿ ಮಾಡುವುದಿಲ್ಲ ಎಂದು ಪ್ರಹ್ಲಾದ ಜೋಶಿ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಕ್ಕೆ ಯಾವ ಯತ್ನವನ್ನು ಬಿಜೆಪಿ ಮಾಡುವುದಿಲ್ಲ. ಕಾಂಗ್ರೆಸ್ ಸರ್ಕಾರ ಐದು ವರ್ಷ ಆಡಳಿತ ಮಾಡಲಿ ಎಂಬುದು ನಮ್ಮ ಆಶಯ. ಆದರೆ, ಅವರ ಆಂತರಿಕ ಗೊಂದಲ, ಭಿನ್ನಾಭಿಪ್ರಾಯದಿಂದ ಸರ್ಕಾರ ಪತನಗೊಂಡರೆ ನಾವೇನು ಮಾಡಲಾಗದು ಎಂದರು.
ಕಾಂಗ್ರೆಸ್ ಸರ್ಕಾರ ಅಸ್ಥಿರಕ್ಕೆ ಬಿಜೆಪಿ ಯಾವ ಯತ್ನವನ್ನು ಮಾಡುತ್ತಿಲ್ಲ. ಸರ್ಕಾರ ಪತನಗೊಳ್ಳಲಿದೆ, ಕಾಂಗ್ರೆಸ್ಸಿನ ಕೆಲಸ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂಬಂತಹ ಹೇಳಿಕೆಗಳನ್ನು ಪಕ್ಷದ ಶಾಸಕರಾಗಲಿ, ಮುಖಂಡರಾಗಲಿ ನೀಡದಿರುವಂತೆ ಸೂಚಿಸಲು ಪಕ್ಷದ ರಾಜ್ಯಾಧ್ಯಕ್ಷರಿಗೆ ತಿಳಿಸಿವೆ. ಈ ವಿಚಾರವಾಗಿ ಕೋರ್ ಕಮಿಟಿ ಸಭೆಯಲ್ಲೂ ಚರ್ಚಿಸಲಾಗುವುದು ಎಂದರು.
ಕಾಂಗ್ರೆಸ್ ಸರ್ಕಾರದಲ್ಲಿ ಸಾಕಷ್ಟು ಗೊಂದಲಗಳಿವೆ. ಸ್ವತಃ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯಾಗಿ ಗೊಂದಲ ಸೃಷ್ಟಿಗೆ ಮುಂದಾಗಿದ್ದು, ಮುಖ್ಯಮಂತ್ರಿ ಅವರಂತೂ ಮೂರು ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿಯ ಕುರಿತಾಗಿ ಸುದ್ದಿಗಳನ್ನು ಹರಿಬಿಡುತ್ತಿದ್ದಾರೆ. ಅಧಿಕಾರ ವಿಷಯವಾಗಿ ಕಾಂಗ್ರೆಸ್ ನಲ್ಲಿ ಸಾಕಷ್ಟು ಗೊಂದಲ ಆಂತರಿಕ ಕಲಹ ಕಂಡು ಬರುತ್ತಿದ್ದು, ಪಕ್ಷ ಅಧಿಕಾರಕ್ಕೆ ಬಂದ ಆರು ತಿಂಗಳಲ್ಲಿಯೇ ಇಂತಹ ಬೆಳವಣಿಗೆ ನಡೆಯುತ್ತಿದೆ ಎಂದರು.