ವಿಜಯಪುರ:- ರಾಜ್ಯದಲ್ಲಿ ಬಿಜೆಪಿಗೆ ಭವಿಷ್ಯ ಇಲ್ಲ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಬಿಜೆಪಿ ಮನೆಯೊಂದು ಮೂರು ಬಾಗಿಲು ಅಗಿದೆ, ಒಬ್ಬರ ಮುಖ ಮತ್ತೊಬ್ಬರು ನೋಡದಂತಾಗಿದೆ. ಬಿಜೆಪಿಯಲ್ಲಿ ಆಂತರಿಕ ಕಲಹ ಬಹಳ ಇದೆ. ಆದರೆ, ಅದು ಯಾವತ್ತೂ ಸರಿ ಆಗಲ್ಲ, ರಾಜ್ಯದಲ್ಲಿ ಬಿಜೆಪಿಗೆ ಭವಿಷ್ಯ ಇಲ್ಲ ಎಂದರು.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮೊದಲಿಗೆ ತಮ್ಮ ಪಕ್ಷದಲ್ಲಿರುವ ಅವ್ಯವಸ್ಥೆಯನ್ನು ಸರಿ ಮಾಡಿಕೊಳ್ಳಲಿ, ಅವರ ತಾಟಿನಲ್ಲಿ ಹೆಗ್ಗಣ ಬಿದ್ದಿದೆ, ನಮ್ಮ ತಾಟಿನಲ್ಲಿ ನೊಣ ಬಿದ್ದಿದೆ ಎಂದು ಹೇಳುತ್ತಿದ್ದಾರೆ ಎಂದು ಕುಟುಕಿದರು.
ಬಿಜೆಪಿ ಶಾಸಕಾಂಗ ಸಭೆಯಲ್ಲಿ ಏನೇನು ಆಗಿದೆ ಎಂಬುದನ್ನು ವಿಜಯೇಂದ್ರ ನೆನಪು ಮಾಡಿಕೊಳ್ಳಲಿ, ಅವರಿಗೆ ನಮ್ಮ ಬಗ್ಗೆ ಮಾತನಾಡುವ ಅವಶ್ಯಕತೆಯಿಲ್ಲ ಎಂದರು.
ಕಾಂಗ್ರೆಸ್ ನಲ್ಲಿ ಎಲ್ಲರೂ ಒಗ್ಗಟ್ಟಿಗಿದ್ದೇವೆ, ಒಂದಾಗಿ ಕೆಲಸ ಮಾಡುತ್ತಿದ್ದೇವೆ. ಜನರು ಸಹ ನಮ್ಮ ಸರ್ಕಾರದಿಂದ ನೀಡಿರೋ 5 ಗ್ಯಾರಂಟಿಗಳಿಂದ ತೃಪ್ತಿಯಾಗಿದ್ಧಾರೆ. ಇದನ್ನು ನೋಡಲು ಬಿಜೆಪಿಯವರಿಗೆ ಆಗುತ್ತಿಲ್ಲ ಎಂದರು.
ಕಾಂಗ್ರೆಸ್ ಶಾಸಕರನ್ನು ಬಿಜೆಪಿಗೆ ಸೆಳೆಯುವ ವಿಚಾರವಾಗಿ ಮಾತನಾಡಿದ ಸವದಿ, ಜನವರಿ 26 ಮುಗಿಯಲಿ, ಯಾರು ಯಾರನ್ನು ಸೆಳೆಯುತ್ತಾರೆ ನೋಡೋಣ ಎಂದರು.