ರಾಯಚೂರು:- ಕಾಂಗ್ರೆಸ್ನಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಎನ್ ಎಸ್ ಬೋಸರಾಜ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಕಾಂಗ್ರೆಸ್ನಲ್ಲಾಗಲಿ, ಕಾಂಗ್ರೆಸ್ ನಾಯಕರಲ್ಲಾಗಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳಿಲ್ಲ ಎಂದರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಶಾಸಕ ಬಿ.ಕೆ.ಹರಿಪ್ರಸಾದ್ ಅಸಮಾಧಾನಗೊಂಡಿಲ್ಲ.
ಅವರ ಸಮಾಜದ ಕಾರ್ಯಕ್ರಮಕ್ಕೆ ಸಿಎಂ, ಸಚಿವರು ಹಾಗೂ ಶಾಸಕರನ್ನು ಕರೆಯಲಾಗಿದೆ. ಸಮಾರಂಭಕ್ಕೆ ಹೋಗುವುದಿಲ್ಲವೆಂದು ಹರಿಪ್ರಸಾದ್ ನುಡಿದಿರುವುದು ಅವರ ವೈಯಕ್ತಿಕ ವಿಚಾರವಾಗಿದೆ. ಅದನ್ನು ಪಕ್ಷಕ್ಕೆ ತಳಕು ಹಾಕುವ ಅಗತ್ಯವಿಲ್ಲ ಎಂದರು.
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಕುರಿತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆಗೆ ಪ್ರತಿಕ್ರಿಯಿಸಿ, ದೇಶದಲ್ಲಿ ಪ್ರಜಾಸ್ವಾಮ್ಯದ ವ್ಯವಸ್ಥೆಯನ್ನು ಹದಗೆಡಿಸಿದ್ದು ಬಿಜೆಪಿ. ಕರ್ನಾಟಕ, ಮಧ್ಯಪ್ರದೇಶ, ಮಹಾರಾಷ್ಟ್ರದಲ್ಲಿ ಸಾವಿರಾರು ಕೋಟಿ ಖರ್ಚು ಮಾಡಿ ಶಾಸಕರನ್ನು ಖರೀದಿ ಮಾಡಿ ಆಡಳಿತ ನಡೆಸಿದ್ದಾರೆ. ಅದಕ್ಕೆ ಪ್ರಧಾನಿ ಮೋದಿ, ಅಮಿತ್ ಶಾ ಮನೆಯಿಂದ ಹಣ ತಂದಿದ್ದಾರಾ?. ಇದನ್ನು ಜೋಶಿಯವರು ಅರ್ಥ ಮಾಡಿಕೊಂಡು ಮಾತನಾಡಬೇಕು ಎಂದು ತಿರುಗೇಟು ನೀಡಿದರು.