ಬೆಂಗಳೂರು: ಸಿಎಂ ಮತ್ತು ಡಿಸಿಎಂ ಮಧ್ಯೆ ಯಾವ ಭಿನ್ನಾಭಿಪ್ರಾಯವೂ ಇಲ್ಲ ಎಂದು ಎಂದು ರಣದೀಪ್ ಸಿಂಗ್ ಸುರ್ಜೆವಾಲ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದೊಳಗೆ ಯಾವುದೇ ಒಡಕಿಲ್ಲ. ಸಿಎಂ ಮತ್ತು ಡಿಸಿಎಂ ಮಧ್ಯೆ ಯಾವ ಭಿನ್ನಾಭಿಪ್ರಾಯವೂ ಇಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಉತ್ತಮವಾಗಿ ಆಡಳಿತ ನಡೆಸುತ್ತಿದೆ ಎಂದು ಕರ್ನಾಟಕ ಕಾಂಗ್ರೆಸ್ನ ಉಸ್ತುವಾರಿಗಳು ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕ ಘಟಕದ ಬಿಜೆಪಿಯಲ್ಲಿ ಬೇರೆ ಬೇರೆ ಬಣಗಳಿವೆ. ಒಂದೆಡೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಬಣ ಇದೆ. ಇನ್ನೊಂದೆಡೆ ಬಸನಗೌಡ ಪಾಟೀಲ್ ಯತ್ನಾಳರದ್ದು ಬಣ ಇದೆ. ಮತ್ತೊಂದೆಡೆ ಆರ್ ಅಶೋಕ್ ಅವರ ಬಣ ಇದೆ. ಮಗದೊಂದೆಡೆ ಅಶ್ವತ್ಥ ನಾರಾಯಣ ಅವರ ಬಣ ಇದೆ ಎಂದು ಬಿಜೆಪಿ ವಿರುದ್ಧ ಸುರ್ಜೆವಾಲ ವ್ಯಂಗ್ಯ ಮಾಡಿದ್ದಾರೆ.
ಫ್ರೀಜ್ ನಲ್ಲಿ ಅಪ್ಪಿತಪ್ಪಿಯೂ ಈ ಆಹಾರ ಪದಾರ್ಥಗಳನ್ನು ಇಡಬೇಡಿ! ಇವು ವಿಷಕ್ಕೆ ಸಮ
ವಿಜಯೇಂದ್ರ ವಿರುದ್ಧ ಯತ್ನಾಳ ವಾಗ್ದಾಳಿ ನಡೆಸುತ್ತಿದ್ದಾರೆ. ಯತ್ನಾಳರಿಗೆ ರಮೇಶ್ ಜಾರಕಿಹೊಳಿ ಬೆಂಬಲ ನೀಡುತ್ತಿದ್ದಾರೆ. ಬಿಜೆಪಿಯ ಆಂತರಿಕ ಕಿತ್ತಾಟಕ್ಕೆ ಜೆಡಿಎಸ್ ಕೂಡ ಬೆಂಬಲ ನೀಡುತ್ತಿದೆ. ಈ ಎಲ್ಲಾ ಹತಾಶೆಗಳನ್ನು ಮುಚ್ಚಿಹಾಕಲು ಕಾಂಗ್ರೆಸ್ ವಿರುದ್ಧ ಬಿಜೆಪಿ ಇಲ್ಲದ ಆರೋಪ ಮಾಡುತ್ತಿದೆ ಎಂದು ರಣದೀಪ್ ಸುರ್ಜೆವಾಲ ಹೇಳಿದ್ದಾರೆ.