ಬೆಳಗಾವಿ: ಲೋಕಸಭೆ ಚುನಾವಣೆ ಬಳಿಕ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಶಾಸಕರೊಬ್ಬರು ಮುನ್ಸೂಚನೆ ನೀಡಿದ್ದು, ಬರುವ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಮಾಜಿ ಸಿಎಂ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಗದೀಶ್ ಶೆಟ್ಟರ್ ಭವಿಷ್ಯ ನುಡಿದರು.
ಶ್ರೀಕ್ಷೇತ್ರ ಯಲ್ಲಮ್ಮಾ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿ ದರ್ಶನ ಪಡೆದ ಅವರು, ನಂತರ ಬಿಜೆಪಿ ಮುಖಂಡ ವಿರುಪಾಕ್ಷ ಮಾಮನಿ ನಿವಾಸಕ್ಕೆ ತೆರಳಿ ನಂತರ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರದಿಂದ ಜನರು ಬೇಸತ್ತು ಹೋಗಿದ್ದು, ಕಾಂಗ್ರೆಸ್ ದಿನದಿಂದ ದಿನಕ್ಕೆ ದೇಶದಲ್ಲಿ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ ಎಂದು ಟೀಕಿಸಿದರು.
Ration Card: ಇಂದಿನಿಂದ ಹೊಸ ರೇಷನ್ ಕಾರ್ಡ್ʼಗೆ ಅರ್ಜಿ ಸಲ್ಲಿಕೆ ಆರಂಭ..! ಇಂತವರಿಗೆ ಮಾತ್ರ ಅವಕಾಶ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಬೇಕಾದರೂ ಚುನಾವಣೆಯಲ್ಲಿ ಸ್ಪರ್ಧಿಸಬಹುದು, ಎದುರಾಳಿ ಪಕ್ಷದ ಅಭ್ಯರ್ಥಿ ಬಗ್ಗೆ ನಾನು ಯಾವುದೇ ಚರ್ಚೆ ಮಾಡಲು ಬಯಸುವುದಿಲ್ಲ, ಸವದತ್ತಿ ಮತ ಕ್ಷೇತ್ರದಲ್ಲಿ ಮಾಮನಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು ಸವದತ್ತಿಯಲ್ಲಿ ಬಿಜೆಪಿ ಪಕ್ಷ ಸಂಘಟಿಸುವಲ್ಲಿ ಅವರ ಪಾತ್ರ ಹೆಚ್ಚಿದೆ. ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಈಗಾಗಲೇ ಅನುದಾನ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.