ಬೆಂಗಳೂರು:- ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲೋದು ಗ್ಯಾರಂಟಿ ಇಲ್ಲ ಎಂದು ವೀರಪ್ಪ ಮೊಯ್ಲಿ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,2024ರ ನಂತರ ಮೋದಿ ಸರ್ಕಾರ ಇರುವುದೇ ಗ್ಯಾರಂಟಿ ಇಲ್ಲ, ನಮ್ಮ ರಾಜ್ಯ ಸರ್ಕಾರದ ಬಗ್ಗೆ ಹಗುರವಾಗಿ ಮಾತನಾಡುವುದಕ್ಕಿಂತ ಮೊದಲು ಅವರ ಪಕ್ಷದ ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡುವ ಬಗ್ಗೆ ಗಮನಹರಿಸಲಿ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪ್ರಚಂಡ ಬಹುಮತದೊಂದಿಗೆ ಆಯ್ಕೆಯಾಗಿ ಜನರ ಆಶೋತ್ತರಗಳಿಗೆ ಅನುಗುಣವಾಗಿ ಗ್ಯಾರಂಟಿಗಳನ್ನು ಜಾರಿಗೊಳಿಸುತ್ತಾ ಜನಪರ ಆಡಳಿತ ನೀಡುತ್ತಿದೆ. ಅದನ್ನು ಸಹಿಸದ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸೋಲಿನ ಹತಾಶೆಯಿಂದ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಇದಕ್ಕೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜನರೇ ತಕ್ಕ ಉತ್ತರ ನೀಡಲಿದ್ದಾರೆ ಎಂದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರ್ಕಾರ ಬೀಳಿಸಲು ಮಾಸ್ಟರ್ ಮೈಂಡ್ ಯೋಜನೆಯ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿ, ಕುಮಾರಸ್ವಾಮಿಯವರಿಗೆ ಮೈಂಡೇ ಇಲ್ಲ, ಇನ್ನೂ ಮಾಸ್ಟರ್ಮೈಂಡ್ ಎಲ್ಲಿಂದ ಎಂದು ಟೀಕಿಸಿದರು.