ಕಂಪ್ಲಿ :-ಪಂಚರಾಜ್ಯಗಳ ಚುನಾವಣಾ ಫಲಿತಾಂಶ ವಿಚಾರವಾಗಿ ಕಂಪ್ಲಿ ಮಂಡಲ ಅಧ್ಯಕ್ಷ ಅರಳಿ ವೀರೇಶ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ರಾಜಸ್ಥಾನ ಗೆದ್ದರೆ ಬಹಳ ಸಂತೋಷ ಆಗುತ್ತೆ ಅಂದುಕೊಂಡಿದ್ವಿ. ಇಷ್ಟರಲ್ಲೇ ತೃಪ್ತಿಪಡಬೇಡಿ ದೇಶದ ಜನ ನಿಮ್ಮ ಜೊತೆ ಇದ್ದಾರೆ. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಮಂತ್ರಿ ಆಗಬೇಕು ಎಂಬ ದೃಷ್ಟಿಯಿಂದ ರಾಜಸ್ಥಾನ, ಮಧ್ಯಪ್ರದೇಶ ಜೊತೆಗೆ ಛತ್ತೀಸ್ ಘಡವನ್ನು ಗಿಫ್ಟ್ ಆಗಿ ಕೊಟ್ಟಿದ್ದಾರೆ. ದೊಡ್ಡ ಆನಂದ ದೇಶದ ಜನತೆಗೆ ಆಗಿದೆ ಎಂದರು.
ಕಾಂಗ್ರೆಸ್ ನವರು ಐದಕ್ಕೆ ಐದು ಗೆಲ್ಲುತ್ತೀವಿ ಅಂತಿದ್ದರು. ತೆಲಂಗಾಣ ಒಂದು ರಾಜ್ಯದಲ್ಲಿ ಮುಖ್ಯಮಂತ್ರಿ ಮೇಲಿದ್ದ ಬೇಸರದಿಂದ. ಕರ್ನಾಟಕ ರಾಜ್ಯದಲ್ಲಿ ಗ್ಯಾರಂಟಿ ಮೂಲಕ ಮೋಸ ಮಾಡಿದ ರೀತಿ. ಮುಸ್ಲಿಂರನ್ನು ಒಂದುಗೂಡಿಸುವಲ್ಲಿ ಯಶಸ್ವಿಯಾದರೋ. ಅದೇ ರೀತಿ ಗೆದ್ದಿದ್ದಾರೆ. ಇನ್ನೂ ಮುಂದಿನ ಚುನಾವಣೆಯಲ್ಲಿ ತೆಲಂಗಾಣ ಗೆಲ್ಲಲ್ಲು ಆಗಲ್ಲ. ಈಗ ರಾಜಸ್ಥಾನ, ಮಧ್ಯಪ್ರದೇಶ, ಛತ್ತಿಸ್ ಘಡ ಗೆದ್ದಿದ್ದೇವೆ. ಮುಂದಿನ ಚುನಾವಣೆಯಲ್ಲಿ ದೇಶ ಗೆಲ್ಲುತ್ತೇವೆ. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಮಂತ್ರಿ ಆಗ್ತಾರೆ. ಕರ್ನಾಟಕ ಮಾದರಿಯಲ್ಲಿ ಗ್ಯಾರಂಟಿ ಕೊಟ್ಟುತ್ತೇವೆ ಅಂದ್ರು. ಕರ್ನಾಟಕದಲ್ಲಿ ಆರು ತಿಂಗಳಲ್ಲೇ ಗ್ಯಾರಂಟಿ ಭರವಸೆ ವಿಫಲವಾಗಿವೆ. ನರೇಂದ್ರ ಮೋದಿ ಪ್ರಧಾನಮಂತ್ರಿ ಮಾಡುವ ದಿಕ್ಕಿನಲ್ಲಿ ಈ ಚುನಾವಣಾ ಫಲಿತಾಂಶ ಸ್ಫೂರ್ತಿ ಆಗಿದೆ ಎಂದರು.
ಗ್ಯಾರಂಟಿ ಯೋಜನೆ ಬಗ್ಗೆ ದೇಶದ ಜನರಿಗೆ ಭರವಸೆ ಇಲ್ಲ. ಗ್ಯಾರಂಟಿ ಯೋಜನೆ ಮೂಲಕ ಕಾಂಗ್ರೆಸ್ ಮತದಾರರಿಗೆ ಮೋಸ ಮಾಡಿದೆ. ಕಾಂಗ್ರೆಸ್ ತನ್ನ ಸಾಧನೆಗಿಂತ ಗ್ಯಾರಂಟಿಯ ಮೋಸದ ಭರವಸೆ ನೀಡ್ತಿದ್ದಾರೆ. ತೆಲಂಗಾಣದ ಶಾಸಕರಿಗೆ ಇದು ಅರ್ಥವಾಗಿದೆ. ಮೂರು ರಾಜ್ಯದ ಜನ ಬಿಜೆಪಿ ಜೊತೆ ಇದ್ದಾರೆ. ನಾವು ಏಕೆ ಕಾಂಗ್ರೆಸ್ ಜೊತೆ ಹೋಗಬೇಕು ಅಂತಾ ಅನಿಸಿದೆ. ಹೇಗಾದರೂ ಮಾಡಿ ಕಾಂಗ್ರೆಸ್ ಶಾಸಕರನ್ನು ಕಟ್ಟು ಹಾಕಬೇಕು ಅಂತಾ ಪ್ರಯತ್ನ ನಡೆಯುತ್ತಿದೆ. ಡಿಕೆಶಿ ಪ್ರಯತ್ನ ದೇಶದಲ್ಲಿ ಎಲ್ಲೂ ಸಫಲವಾಗಲ್ಲ. ಬೆಂಗಳೂರಿನಲ್ಲಿ ಸಾಕಷ್ಟು ಗುಂಡಿಗಳಿವೆ. ಬಿಬಿಎಂಪಿ ನಿಮ್ಮ ಕೈಯಲ್ಲಿದೆ. ನೀವು ಬೆಂಗಳೂರಿಗೆ ಬಂದು ಗುಂಡಿ ತುಂಬಿಸುವ ಕೆಲಸ ಮಾಡಿ. ಮುಂದಿನ ಚುನಾವಣೆಯಲ್ಲಿ ಕನಕಪುರ ಜನ ಏನು ಮಾಡ್ತಾರೋ ಗೊತ್ತಿಲ್ಲ. ಕರ್ನಾಟಕದ ರಾಜಕಾರಣದ ಭವಿಷ್ಯದ ಬಗ್ಗೆ ನಾವು ಏನು ತಪ್ಪು ಮಾಡಿದ್ದೇವೆ ಎಂಬುದು ಹಿಂದಿನ ಚುನಾವಣೆಯಲ್ಲಿ ಗೊತ್ತಾಗಿದೆ. ಚುನಾವಣೆಯಲ್ಲಿ ಎಲ್ಲಿ ತಪ್ಪಾಗಿದೆ ಎಂಬುದನ್ನು ಕೇಂದ್ರದ ನಾಯಕರು ಸರಿ ಮಾಡ್ತಾರೆ. ಕರ್ನಾಟಕದ ಸೋಲು ದೇಶದಲ್ಲಿ ನೀವು ಹೀಗೆ ಬಾರದು ಅಂತಾ ತೋರಿಸಿಕೊಟ್ಟಿದೆ. ಕಾಂಗ್ರೆಸ್ ನವರಿಗೆ ಬುದ್ದಿ ಇಲ್ಲ. ಈಗಾಗಲೇ ಅವರು ಬಡಿದಾಡಿ ಕೊಳ್ಳುತ್ತಿದ್ದಾರೆ. ಅವರು ಯಾವುದೇ ಕಾರಣಕ್ಕು ಒಂದಾಗಲ್ಲ ಎಂದು ವ್ಯಂಗ್ಯವಾಡಿದ್ದಾರೆ.