ಬೆಂಗಳೂರು: ಬಿಜೆಪಿಯಲ್ಲಿನ ಅಸಮಾಧಾನಿತರು, ಸಮಾಧಾನಿತರು ನಮ್ಮ ಜೊತೆ ಎನ್ನುವ ಪ್ರಶ್ನೆ ಇಲ್ಲ ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಈ ಹಿಂದೆ ರಾಯಣ್ಣ ಬ್ರಿಗೇಡ್ ಅನ್ನು ಅಮಿತ್ ಶಾ ಅವರ ಮಾತು ಕೇಳಿ ನಿಲ್ಲಿಸಿದ್ದೆ. ಈಗ ಸಾಧು ಸಂತರ ಜೊತೆ ಸೇರಿಕೊಂಡು ಕ್ರಾಂತಿವೀರ ಬ್ರಿಗೇಡ್ ಶುರು ಮಾಡಿದ್ದೇವೆ.
SBI ATM Franchise: ಈ ದಾಖಲೆಗಳು ಇದ್ರೆ ಸಾಕು.. ಪ್ರತಿ ತಿಂಗಳು 60 ಸಾವಿರ ರೂ.ವರೆಗೆ ಸಂಪಾದಿಸಬಹುದು..!
ಈಬಾರಿ ಯಾವುದೇ ಕಾರಣಕ್ಕೂ ನಿಲ್ಲಿಸೋದಿಲ್ಲ. ಯಾರು ಬೆಂಬಲಿಸಿದರೂ ಸ್ವಾಗತ ಮಾಡ್ತೇವೆ. ಹಿಂದೂ ಸಮಾಜದಲ್ಲಿರುವ ಎಲ್ಲ ಸಕಲ ಸಮಾಜದವರಿಗೆ ಈ ಬ್ರಿಗೇಡ್ ಬೆಂಬಲ ಕೊಡುತ್ತದೆ. ಹಿಂದೆ ರಾಯಣ್ಣ ಬ್ರಿಗೇಡ್ ಕಟ್ಟಿದ್ದಾಗ ಯಾವುದೇ ಸ್ವಾಮೀಜಿಗಳು ನೇತೃತ್ವ ತೆಗೆದುಕೊಂಡಿರಲಿಲ್ಲ. ದೊಡ್ಡವರ ಮಾತು ಕೇಳುವ ಅಭ್ಯಾಸ ಆಗ ನನಗೆ ಇತ್ತು,
ಆದರೆ ಇವತ್ತು ಇಲ್ಲ. ಅಂದು ದೊಡ್ಡವರ ಮಾತು ಕೇಳಿ ನಿಲ್ಲಿಸಿದೆ. ಇಂದು ಯಾವುದೇ ಕಾರಣಕ್ಕೂ ಈ ಬ್ರಿಗೇಡ್ ನಿಲ್ಲುವುದಿಲ್ಲ. ಇದು ಯಾವುದೇ ಪಕ್ಷದ ಬ್ರಿಗೇಡ್ ಆಗಿಲ್ಲ.ಬಿಜೆಪಿಯಲ್ಲಿನ ಅಸಮಾಧಾನಿತರು, ಸಮಾಧಾನಿತರು ನಮ್ಮ ಜೊತೆ ಎನ್ನುವ ಪ್ರಶ್ನೆ ಇಲ್ಲ. ಫೆ.4 ರಂದು ಎಲ್ಲವೂ ವೇದಿಕೆ ಮೇಲೆ ಗೊತ್ತಾಗುತ್ತದೆ ಎಂದು ಹೇಳಿದರು.