ಬೆಂಗಳೂರು: ಹೊಸ ವರ್ಷಾಚರಣೆಗೆ ದಿನಗಣನೆ ಆರಂಭವಾದ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತರ ಕಚೇರಿಗೆ ಸಭೆ ನಡೆಸಿದ್ದಾರೆ. ಸಭೆ ಬಳಿಕ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಪ್ರತಿವರ್ಷದಂತೆ ಈ ಬಾರಿಯೂ ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗುವುದು. ಸಭೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದರು.
ಹೊಸ ವರ್ಷಾಚರಣೆ ದಿನ ಯಾವುದೇ ಅಹಿತಕರ ಘಟನೆ ಆಗಬಾರದು. ಬಂದೋಬಸ್ತ್ ಕ್ರಮಗಳನ್ನು ಕೈಗೊಳ್ಳುವಂತೆ ಸಭೆ ನಡೆಸಲಾಗಿದೆ. ಮಹಿಳಾ ಸುರಕ್ಷತೆಗೆ ಹೆಚ್ಚು ಒತ್ತು ನೀಡಲಾಗುತ್ತದೆ ಎಂದು ಹೇಳಿದ್ದಾರೆ.
SBI Recruitment: ಉದ್ಯೋಗ ಹುಡುಕುತ್ತಿದ್ದೀರಾ..? SBI ಬ್ಯಾಂಕ್ʼನಲ್ಲಿದೆ ಭರ್ಜರಿ ಉದ್ಯೋಗಾವಕಾಶ! ಲಕ್ಷಗಟ್ಟಲೆ ಸಂಬಳ
ಬೆಂಗಳೂರಲ್ಲಿ 7 ಲಕ್ಷ ಜನ ಮಿಡ್ನೈಟ್ ಸೆಲೆಬ್ರೆಷನ್ನಲ್ಲಿ ಭಾಗಿಯಾಗುತ್ತಾರೆ. ಏನೇ ಅಹಿತಕರ ಘಟನೆ ನಡೆದ್ರೂ ಏರಿಯಾ ಡಿಸಿಪಿ ಹೊಣೆಯಾಗಲಿದ್ದಾರೆ. ಟ್ರಾಫಿಕ್ ನಿರ್ವಹಣೆ ಸಮಸ್ಯೆ ಆಗದಂತೆ ಮೆಟ್ರೋ, ಆಟೋಗಳು, ಬಸ್ಗಳ ಓಡಾಟ ಸೇರಿದಂತೆ ಹಲವು ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಸಂಭ್ರಮಾಚರಣೆಗೆ ನಿರ್ಬಂಧ ಇಲ್ಲ ಎಂದಿದ್ದಾರೆ.
ಇನ್ನೂ ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಯನ್ನು ಜನರು ಸಂತೋಷದಿಂದ ಆಚರಿಸಬೇಕು. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರವಹಿಸಲಾಗುವುದು. ಬೆಂಗಳೂರಿಗೆ ಬರಲು ಯಾರೂ ಭಯಪಡದಂತೆ ಆಚರಿಸುವ ರೀತಿ ವಾತಾವರಣ ನಿರ್ಮಿಸಬೇಕು ಎಂದರು.