ಬೆಂಗಳೂರು: ರಾಜ್ಯದ ಯಾವುದೇ ಜಿಲ್ಲೆಯಲ್ಲಿಯೂ ಬಿತ್ತನೆ ಬೀಜ, ರಸಗೊಬ್ಬರದ ಕೊರತೆ ಇಲ್ಲ. ಅಧಿಕಾರಿಗಳು ರೈತರಿಗೆ ಸೂಕ್ತ ಮಾಹಿತಿ ಮಾರ್ಗದರ್ಶನ ನೀಡಬೇಕು.ಅನಗತ್ಯ ಗೊಂದಲ ಸೃಷ್ಟಿ ಮಾಡಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು. ಸಭೆಯಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗು ಅಭಿವೃದ್ಧಿ ಆಯುಕ್ತರಾದ ಶಾಲಿನಿ ರಜನೀಶ್ ಅವರು ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಕುರಿತು ಹಲವು ಸಲಹೆಗಳನ್ನು ನೀಡಿದರು.
ನಿಮಗೆ ಮೃದುವಾದ ಚಪಾತಿ ಬೇಕೇ? ಈ ಟಿಪ್ಸ್ ಫಾಲೋ ಮಾಡಿ – ಬೆಣ್ಣೆಯಂತ ಚಪಾತಿ ರೆಡಿ.!
ಕೃಷಿ ಇಲಾಖೆ ಕಾರ್ಯದರ್ಶಿ ಅನ್ಬುಕುಮಾರ್ ಅವರುಹಣಕಾಸು ಇಲಾಖೆ ಅನುಮೋದನೆಯೊಂದಿಗೆ ಶೀಘ್ರವಾಗಿ ಬಾಕಿ ಉಳಿದ ಆದೇಶ ಘೋಷಣೆಗಳು ಸರ್ಕಾರಿ ಹೊರಡಿಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು. ಕೃಷಿ ಇಲಾಖೆ ಆಯುಕ್ತ ವೈ.ಎಸ್.ಪಾಟೀಲ್, ಆಹಾರ ಸಂಸ್ಕರಣೆ ಹಾಗೂ ಕಟಾವು ತಂತ್ರಜ್ಞಾನ ವಿಶೇಷ ಕಾರ್ಯದರ್ಶಿ ರೋಹಿಣಿ ಸಿಂಧೂರಿ, ಜಲಾನಯನ ಅಭಿವೃದ್ಧಿ ಆಯುಕ್ತ ಡಾ. ಗಿರೀಶ್, ಕೃಷಿ ಇಲಾಖೆ ನಿರ್ದೇಶಕ ಡಾ. ಜಿ.ಟಿ.ಪುತ್ರ, ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು..