ಮಂಗಳೂರು: ಆಪ್ತರ ಜೊತೆ ಸಚಿವ ಸತೀಶ್ ಜಾರಕಿಹೊಳಿ ದುಬೈ ಪ್ರವಾಸ ಕೈಗೊಂಡಿರುವ ಬಗ್ಗೆ ಮಾತನಾಡಿದ ಸಚಿವ ಸಂತೋಷ್ ಲಾಡ್, ಸತೀಶ್ ಜಾರಕಿಹೊಳಿ ದುಬೈಗೆ ಹೋಗಿರುವುದರಲ್ಲಿ ತಪ್ಪೇನಿದೆ. ಶಿಸ್ತಿನ ರಾಜಕಾರಣಿಗಳಲ್ಲಿ ಸತೀಶ್ ಜಾರಕಿಹೊಳಿ ಕೂಡ ಒಬ್ಬರು. ಸತೀಶ್ ಜಾರಕಿಹೊಳಿ ಏನೇ ಮಾಡಿದರೂ ಅರ್ಥಪೂರ್ಣವಾಗಿರುತ್ತದೆ.
Vishwas Vaidya: ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ಸತೀಶ್ ಜಾರಕಿಹೊಳಿ CM ಆಗುವುದು ಅಷ್ಟೇ ಸತ್ಯ: ಕಾಂಗ್ರೆಸ್ ಶಾಸಕ
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನಿಜವಾದ ಕಾಂಗ್ರೆಸ್ಸಿಗ. ವಿರಾಮಕ್ಕಾಗಿ ದುಬೈಗೆ ಹೋಗಿರಬಹುದು, ಯಾವುದೇ ಸಂಶಯ ಬೇಡ ಎಂದರು. ಇನ್ನೂ ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಮಾತನಾಡಿದ ಸಚಿವ ಸಂತೋಷ್ ಲಾಡ್, ಧಾರವಾಡ ಜಿಲ್ಲೆಯಲ್ಲಿ ಮೂವರು ಪ್ರಮುಖರು ಸೇರ್ಪಡೆ ಸಾಧ್ಯತೆಯಿದೆ. ಬಿಜೆಪಿಯ ಮಾಜಿ ಸಚಿವರು, ಶಾಸಕರು ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ ಇದೆ ಎಂದರು.