ಬೆಂಗಳೂರು: ಬೊಮ್ಮಾಯಿ ವಿರುದ್ಧ ಅಸಮಾಧಾನ ಇದೆ, ಶಿಗ್ಗಾವಿಯಲ್ಲೂ ನಾವೇ ಗೆಲುವು ಸಾಧಿಸುತ್ತೇವೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 3 ಕ್ಷೇತ್ರ ಗೆಲ್ಲುವ ವಿಶ್ವಾಸ ಇದೆ. ಹಿಂದೆ ಬೊಮ್ಮಾಯಿ 36 ಸಾವಿರ ಮತಗಳ ಅಂತರದಿಂದ ಗೆದ್ದಿದ್ದರು. ಈಗ 10 ಸಾವಿರಕ್ಕೆ ಬಂದಿದ್ದಾರೆ ಅಂತಿದೆ. ಶಿಗ್ಗಾವಿಯಲ್ಲಿ ಬಸವರಾಜ ಬೊಮ್ಮಾಯಿ ವಿರುದ್ಧ ಅಸಮಾಧಾನ ಇದೆ. ಹೀಗಾಗಿ ಶಿಗ್ಗಾವಿಯಲ್ಲೂ ನಾವೇ ಗೆಲುವು ಸಾಧಿಸುತ್ತೇವೆ ಎಂದು ತಿಳಿಸಿದರು.
ರೈತರೇ ಗಮನಿಸಿ.. ಅಣಬೆ ಕೃಷಿ ಮಾಡುವರಿಗೆ ಶೆಡ್ ನಿರ್ಮಾಣಕ್ಕಾಗಿ ಶೇ.50 ಸಬ್ಸಿಡಿ! ಇಂದೇ ಅರ್ಜಿ ಸಲ್ಲಿಸಿ
ಇನ್ನು ಇದೇ ಸಂದರ್ಭದಲ್ಲಿ ಚುನಾವಣೋತ್ತರ ಸಮೀಕ್ಷೆಗಳ ಬಗ್ಗೆ ಮಾತನಾಡಿದ ಅವರು, ಚುನಾವಣೋತ್ತರ ಸಮೀಕ್ಷೆಗಳು ಭಿನ್ನ ವರದಿಗಳನ್ನು ಕೊಟ್ಟಿವೆ. ಅದನ್ನು ನಿಖರವಾಗಿ ಹೇಳಲು ಸಾಧ್ಯವಿಲ್ಲ. ಆದರೆ ಜನರು ಮಹಾರಾಷ್ಟ್ರದಲ್ಲಿ ಸರ್ಕಾರದ ವಿರುದ್ಧ ಬೇಸತ್ತಿದ್ದಾರೆ. ಭ್ರಷ್ಟಾಚಾರ ಮಿತಿ ಮೀರಿದೆ.ಯುವಕರಿಗೆ ಸಿಗುತ್ತಿರುವ ಉದ್ಯೋಗಗಳು ಗುಜರಾತ್ ಪಾಲಾಗುತ್ತಿವೆ. ಜನರಲ್ಲಿ ಇದರ ಬಗ್ಗೆ ಅಸಮಾಧಾನ ಇದೆ. ಇದನ್ನೆಲ್ಲಾ ಗಮನಿಸಿದರೆ ಮಹಾ ವಿಕಾಸ್ ಅಘಾಡಿ ಅಧಿಕಾರಕ್ಕೆ ಬರುವ ವಿಶ್ವಾಸ ಇದೆ ಎಂದರು.