ಬೆಳಗಾವಿ: ಬೆಳಗಾವಿ ಲೋಕಸಭೆ ಟಿಕೆಟ್ ಜಗದೀಶ್ ಶೆಟ್ಟರ್ ಅವರಿಗೆ ನೀಡದಂತೆ ಬೆಳಗಾವಿ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಹೌದು ಯಾವುದೇ ಕಾರಣಕ್ಕೂ ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದಂತೆ ಬೆಳಗಾವಿ ಜಿಲ್ಲೆಯ ಬಿಜೆಪಿ ನಾಯಕರು, ಕೆಲ ಮುಖಂಡರ ಪಟ್ಟು ಹಿಡಿದಿದ್ದಾರೆ. ಇಷ್ಟೇ ಅಲ್ಲದೆ ಟಿಕೆಟ್ ನೀಡುವುದನ್ನು ವಿರೋಧಿಸಿ ದೆಹಲಿಗೆ ಹೋಗಲು ಮುಖಂಡರ ಪ್ಲ್ಯಾನ್ ಮಾಡಿದ್ದಾರೆ.
ಈ ವಿಚಾರವಾಗಿ ಪ್ರಭಾಕರ್ ಕೋರೆ ಮನೆಯಲ್ಲಿ ಶಾಸಕ ಅಭಯ್ ಪಾಟೀಲ್, ಬಿಜೆಪಿ ಉಪಾಧ್ಯಕ್ಷ ಅನಿಲ್ ಬೆನಕೆ, ಮಹಾಂತೇಶ ಕವಟಗಿಮಠ, ಎಂ.ಬಿ.ಜಿರಲೆ ಸಭೆ ಸೇರಿದ್ದರು. ಸಭೆಯಲ್ಲಿ ರಾಜ್ಯಸಭಾ ಸದಸ್ಯ ಕಡಾಡಿ ನೇತೃತ್ವದಲ್ಲಿ ದೆಹಲಿಗೆ ಹೋಗಲು ಪ್ಲ್ಯಾನ್ ಮಾಡಿದ್ದಾರೆ. ಇನ್ನೇರಡು ದಿನಗಳಲ್ಲಿ ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿಯಾಗುವ ಸಾಧ್ಯತೆ ಇದೆ. ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಮುನಿಸಿಕೊಂಡು ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು.
ಪಿಯುಸಿ ಪಾಸಾದವರಿಗೆ ಭರ್ಜರಿ ಉದ್ಯೋಗವಕಾಶ.! ತಿಂಗಳಿಗೆ ₹63,000 ಸಂಬಳ! ಈಗಲೇ ಅರ್ಜಿ ಸಲ್ಲಿಸಿ
ಆದ್ರೆ, ಇತ್ತೀಚೆಗೆ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ತೊರೆದು ವಾಪಸ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಸೇರ್ಪಡೆಗೂ ಮುನ್ನವೇ ಅವರು ಬೆಳಗಾವಿ ಅಥವಾ ಹುಬ್ಬಳ್ಳಿ-ಧಾರವಾಡ, ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ನಿಡಬೇಕೆಂದು ಬೇಡಿಕೆ ಇಟ್ಟಿದ್ದರು. ಇದಕ್ಕೆ ಬಿಜೆಪಿ ನಾಯಕರು ಸಹ ಯಾವುದಾದರೂ ಒಂದು ಲೋಕಸಭಾ ಕ್ಷೇತ್ರದ ಟಿಕೆಟ್ ನೀಡುವುದಾಗಿ ಭರವಸೆ ನೀಡಿ ಪಕ್ಷಕ್ಕೆ ಬರಮಾಡಿಕೊಂಡಿದ್ದರು.