ರಾಂಚಿ: ಪ್ರಧಾನಿ ನರೇಂದ್ರ ಮೋದಿ ಪ್ರಯಾಣಿಸಬೇಕಿದ್ದವಿ ಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿತ್ತು. ಇಂದು ಮಧ್ಯಾಹ್ನ ಜಾರ್ಖಂಡ್ ದಿಯೋಘರ್ ನಲ್ಲಿ ಎರಡು ರ್ಯಾಲಿಗಳಲ್ಲಿ ಭಾಗಿಯಾಗಿದ್ದರು. ಮೊದಲಿಗೆ ಬುಡಕಟ್ಟು ವೀರ ಬಿರ್ಸಾ ಮುಂಡಾ ಅವರ ಗೌರವಾರ್ಥ ನಡೆಯುವ ಜಂಜಾಟಿಯಾ ಗೌರವ್ ದಿವಸ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗಿಯಾಗಿದ್ದರು. ಬಳಿಕ ಬೃಹತ್ ರ್ಯಾಲಿಯಲ್ಲಿ ಭಾಗವಹಿಸಿ ತಮ್ಮಅಭ್ಯರ್ಥಿಗಳ ಪರ ಮತ ಪ್ರಚಾರ ನಡೆಸಿದರು. ಈ ವೇಳೆ ಜಾರ್ಖಂಡ್ ನಿಂದ ದೆಹಲಿಗೆ ತೆರಳಬೇಕಿದ್ದಾಗ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿತ್ತು. ತಾಂತ್ರಿಕ ದೋಷ ಬಗೆಹರಿಸಿದ ಬಳಿಕ ವಿಮಾನ ಟೇಕ್ ಆಫ್ ಆಯಿತು. ಹೀಗಾಗಿ ಪ್ರಧಾನಿ ಮೋದಿ ಅವರು ದೆಹಲಿಗೆ ಆಗಮಿಸಲು ತಡವಾಯಿತು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಇತ್ತ ಮತ್ತೊಂದು ಬೆಳವಣಿಗೆಯಲ್ಲಿ ಜಾರ್ಖಂಡ್ ನ ದಿಯೋಘರ್ ನಿಂದ ಕೇವಲ 80 ಕಿ.ಮೀ ದೂರದಲ್ಲಿರುವ ಗೊಡ್ಡಾದಲ್ಲಿ ರಾಹುಲ್ ಗಾಂಧಿ ಅವರ ಹೆಲಿಕಾಫ್ಟರ್ ನನ್ನು ತಡೆಹಿಡಿಯಲಾಗಿತ್ತು. ಏರ್ ಟ್ರಾಫಿಕ್ ಕಂಟ್ರೋಲ್ ನ ಅನುಮತಿಗಾಗಿ 45 ನಿಮಿಷಗಳ ಕಾಲ ಕಾದು ಕುಳಿತಿದ್ದರು. ಇದು ವಿಪಕ್ಷ ನಾಯಕರ ಪ್ರಚಾರಕ್ಕೆ ಅಡ್ಡಿಪಡಿಸಬೇಕೆಂದು ಉದ್ದೇಶಪೂರ್ವಕವಾಗಿ ವಿಳಂಬ ಮಾಡಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.