ಧಾರವಾಡ:- ನನಗೆ ಲೋಕಸಭಾ ಚುನಾವಣೆಗೆ ಟಿಕೆಟ್ ಕೊಡುವ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ನಾನಂತೂ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನನಗೆ ಟಿಕೆಟ್ ಕೊಡುವ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದರು.
ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದಾರೆ. ಹೀಗಾಗಿ ಅವರಿಗೆ ಲೋಕಸಭಾ ಟಿಕೆಟ್ ನೀಡುವ ಬಗ್ಗೆ ಕಾಂಗ್ರೆಸ್ನಲ್ಲಿ ಚರ್ಚೆಗಳು ನಡೆದಿವೆ ಎನ್ನುವ ಸುದ್ದಿ ಹರಿದಾಡುತ್ತಿವೆ. ಇದರ ಮಧ್ಯೆ ಇದೀಗ ಸ್ವತಃ ಜಗದೀಶ ಶೆಟ್ಟರ್ ಇದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ.
ಲೋಕಸಭೆ ತಯಾರಿ ಕುರಿತು ಕಾಂಗ್ರೆಸ್ ಸಭೆಗೂ ಮುಂಚೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಹಿನ್ನೆಲೆ ಕಾರ್ಯಕರ್ತರನ್ನು ಸೇರಿಸಿ ಮಾರ್ಗದರ್ಶನ ಮಾಡುವ ಸಭೆ ಇದು. ಜ. 10ಕ್ಕೆ ಬೆಂಗಳೂರಿನಲ್ಲಿ ಸಭೆ ಕರೆಯಲಾಗಿದೆ. ಪಕ್ಷದ ರಾಜ್ಯಾಧ್ಯಕ್ಷರು, ಸಿಎಂ ಸಭೆ ನಡೆಸಲಿದ್ದಾರೆ.
ಲೋಕಸಭೆ ಚುನಾವಣೆ ಬಗ್ಗೆ ಸಭೆಯಲ್ಲಿ ಚರ್ಚೆ ಆಗಲಿದೆ. ಟಿಕೆಟ್ ಆಕಾಂಕ್ಷಿಗಳು, ಅಭ್ಯರ್ಥಿಗಳ ಬಗ್ಗೆ ಕೂಡ ಸಭೆಯಲ್ಲಿ ಚರ್ಚೆ ಆಗುತ್ತದೆ ಎಂದು ಹೇಳಿದ್ದಾರೆ.