ಬೆಂಗಳೂರು: ಕರ್ನಾಟಕದಲ್ಲಿ 135 ಸ್ಥಾನ ಗೆದ್ದು ಭರ್ಜರಿ ಬಹುಮತದೊಂದಿಗೆ ಆಡಳಿತದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಪಕ್ಷದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದೆ. ಅಧ್ಯಕ್ಷ ಸ್ಥಾನದಲ್ಲಿ ಕೂರಲು ಕಾಂಗ್ರೆಸ್ನಲ್ಲೇ ಸದ್ದಿಲ್ಲದೆ ಪೈಪೋಟಿ ಶುರುವಾಗಿದೆ. ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆಯ ಸುಳಿವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ನೀಡಿದ್ದಾರೆ.
ಹೌದು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಓಡಿಶಾದಲ್ಲಿ ಅಧ್ಯಕ್ಷರ ಬದಲಾವಣೆ ಮಾಡಿ ಬಂದಿದ್ದಿನಿ. ಅಲ್ಲಿ ಹಿಂದುಳಿದ ವರ್ಗದವರು ಅಧ್ಯಕ್ಷರಾಗಿದ್ದಾರೆ. ಬಾಕಿ ಉಳಿದ ರಾಜ್ಯಗಳಲ್ಲೂ ಕೆಲವೇ ದಿನಗಳಲ್ಲಿ ಬದಲಾವಣೆ ಆಗುತ್ತವೆ. ಈ ಬಗ್ಗೆ ನಿರ್ಧಿಷ್ಟವಾಗಿ ನಾನು ಹೇಳುವುದಕ್ಕೆ ಆಗುವುದಿಲ್ಲ. ನಾವು ಒಂದೊಂದು ರಾಜ್ಯಗಳಲ್ಲಿ ಬದಲಾವಣೆ ಮಾಡುತ್ತಿದ್ದೇವೆ. ಇನ್ನೂ ಒಂದು ಎರಡು ದಿನದಲ್ಲಿ ಮತ್ತೆ ಒಂದೆರಡು ರಾಜ್ಯಗಳಲ್ಲಿ ಮಾಡುತ್ತೇವೆ ಎಂಟು ದಿನದಲ್ಲಿ ಎಲ್ಲಾ ಬದಲಾವಣೆ ಮುಗಿಯುತ್ತದೆ ಎಂದು ಖರ್ಗೆ ಹೇಳಿದರು.
10th, PUC ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ..! ಇಂದೇ ಅಪ್ಲೈ ಮಾಡಿ
ಇನ್ನು ಸಚಿವ ಸತೀಶ್ ಜಾರಕಿಹೊಳಿ ಭೇಟಿ ಬಗ್ಗೆ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಭೇಟಿ ದೊಡ್ಡ ಮಾತಾ? ಎಂದು ಪ್ರಶ್ನೆ ಮಾಡಿದರು. ನಾನು ಎಐಸಿಸಿ ಅಧ್ಯಕ್ಷ, ಎಲ್ಲರೂ ಬಂದು ಭೇಟಿ ಮಾಡುತ್ತಾರೆ ಇದು ದೊಡ್ಡ ಮಾತಾ? ನಮ್ಮ ರಾಜ್ಯದವರಿಗೆ ಬೇಗ ಅಪಾಯಿಂಟಮೆಂಟ್ ಸಿಗುತ್ತೆ, ಬಂದವರಿಗೆ ಬೇಡ ಅನ್ನಲು ಆಗುತ್ತಾ? ಪರಮೇಶ್ವರ್ ಬರ್ತಾರೆ, ಡಿಕೆ ಶಿವಕುಮಾರ ಬರ್ತಾರೆ, ಸತೀಶ್ ಜಾರಕಿಹೊಳಿ ಬರ್ತಾರೆ, ಸಿದ್ದರಾಮಯ್ಯ ಫೋನ್ ಮಾಡ್ತಾರೆ ಇದರಲ್ಲಿ ವಿಶೇಷ ಏನಿಲ್ಲ ಎಂದರು.