ಹಾಸನ:- ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಲೈಂಗಿಕ ದೌರ್ಜನ್ಯ ಕೇಸ್ ಬಗ್ಗೆ ಸೂರಜ್ ರೇವಣ್ಣ ಹೇಳಿದ್ದಾರೆ.
NEET, NET ಪರೀಕ್ಷೆಯಲ್ಲಿ ಅಕ್ರಮ: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಮುಖ್ಯಸ್ಥ ವಜಾ
ಈ ಸಂಬಂಧ ಮಾತನಾಡಿದ ಅವರು,ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ. ಈ ಷಡ್ಯಂತ್ರ ಎಷ್ಟು ದಿನದಿಂದ ನಡೆಯುತ್ತಿದೆ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು.
ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಈ ಆರೋಪವನ್ನು ಖಡಾಖಂಡಿತವಾಗಿ ತಿರಸ್ಕಾರ ಮಾಡುತ್ತೇನೆ. ಕಾನೂನು ವ್ಯವಸ್ಥೆಯಲ್ಲಿ ಏನು ತೀರ್ಮಾನ ಆಗಬೇಕು ಆಗುತ್ತೆ. ಅವನ ಮೇಲೆಯೂ ಎಫ್ಐಆರ್ ಆಗಿದೆ ಎಂದರು.
ಕಾನೂನಿನಲ್ಲಿ ತನಿಖೆ ಆಗಲಿ, ಸತ್ಯಾಸತ್ಯತೆ ಹೊರಗೆ ಬರಲಿ. ಸತ್ಯ ಏನಿದೆ ಅದು ಹೊರಗೆ ಬಂದೇ ಬರುತ್ತೆ. ನಾಡಿನ ಕಾನೂನಿನ ಮೇಲೆ ನನಗೆ ವಿಶ್ವಾಸವಿದೆ. ಇದು ಸಂಪೂರ್ಣ ರಾಜಕೀಯ ಷಡ್ಯಂತ್ರ. ಅದರ ಬಗ್ಗೆ ನಾನು ಇಂದು ಏನೂ ಪ್ರತಿಕ್ರಿಯೆ ಕೊಡಲ್ಲ ಎಂದು ಹೇಳಿದರು. ಇಂತಹವರು, ಅಂತಹವರು, ಅವರು, ಇವರು ಮಾಡಿದ್ರು ಅಂತ ನಾನು ಚರ್ಚೆ ಮಾಡಲು ಹೋಗಲ್ಲ. ತನಿಖೆ ಪ್ರಗತಿಯಲ್ಲಿದೆ, ಸತ್ಯಾಸತ್ಯತೆ ಹೊರಗೆ ಬರುತ್ತೆ. ಇಡೀ ರಾಜ್ಯದ ಜನತೆ ಅದನ್ನು ನೋಡುತ್ತಾರೆ ಎಂದು ಸೂರಜ್ ರೇವಣ್ಣ ತಿಳಿಸಿದ್ದಾರೆ.