ಬೆಳಗಾವಿ: ಲೋಕಸಭೆಯಲ್ಲಿ ಸ್ಮೋಕ್ ದಾಳಿ ನಡೆಸಿದ ಆರೋಪಿ ಮನೋರಂಜನ್ ಹಿನ್ನೆಲೆ ಬಗ್ಗೆ ಕರ್ನಾಟಕ ಪೊಲೀಸರು ತನಿಖೆ ಮಾಡಬೇಕು ಎಂದು ವಿಧಾನಪರಿಷತ್ ಕಾಂಗ್ರೆಸ್ ಸದಸ್ಯ ಬಿ.ಕೆ ಹರಿಪ್ರಸಾದ್ ಆಗ್ರಹಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಮಾತನಾಡಿದ ಅವರು,ನಿನ್ನೆ ಮನೋರಂಜನ್ ದೇಶಕ್ಕೆ ಮನರಂಜನೆ ಕೊಟ್ಟಿದ್ದಾನೆ. ವಿಶ್ವಗುರು ನರೇಂದ್ರ ಮೋದಿಯವರನ್ನು ದೇವರು ಎಂದು ಮನೋರಂಜನ್ ಪರಿಗಣಿಸುತ್ತಿದ್ದರು ಎಂದು ಅವರ ತಂದೆ ಹೇಳಿದ್ದಾರೆ ಎಂದರು.
ಫೇಕ್ ಅಂಧಭಕ್ತರು ಯಾವ ರೀತಿ ಇರ್ತಾರೆ ಎಂದು ನಿನ್ನೆ ಸಾಬೀತು ಮಾಡಿದ್ದಾರೆ. ರಾಷ್ಟ್ರದ ಪ್ರಖ್ಯಾತಿಗೆ ಕಪ್ಪು ಬಣ ಬಳಿದಿದ್ದಾರೆ. ವಿಶ್ವಗುರು ಆಡಳಿತ ವೈಫಲ್ಯವನ್ನು ಇಡಿ ವಿಶ್ವವೇ ನೋಡಿದೆ. ಆದ್ದರಿಂದ ವಿಶ್ವಗುರು ಇದರ ಹೊಣೆ ಹೊರಬೇಕಾಗುತ್ತದೆ ಎಂದು ಅಭಿಪ್ರಾಯಪಟ್ಟರು.ಡಿಸೆಂಬರ್ 13 ರಂದು ಯೋಧರು, ಪೊಲೀಸರು ಪಾರ್ಲಿಮೆಂಟ್ ರಕ್ಷಣೆ ಮಾಡಿದ ದಿನವಾಗಿದೆ. ಇವರೆಲ್ಲ ಅಂತಹ ದಿನವನ್ನೇ ಹುಡುಕಾತ್ತಾರೆ.
Nail Cutting At Night: ರಾತ್ರಿ ಯಾಕೆ ಉಗುರು ಕತ್ತರಿಸಬಾರದು ಗೊತ್ತಾ..? ಇಲ್ಲಿದೆ ನೋಡಿ ಕಾರಣ
ಡಿಸೆಂಬರ್ 6, ಬುದ್ದ ಹುಟ್ಟಿದ ದಿನಗಳನ್ನೇ ಇವರು ಹುಡುಕುತ್ತಾರೆ. ಮನೋರಂಜನ್ ಹಿನ್ನೆಲೆಯನ್ನು ಕರ್ನಾಟಕ ರಾಜ್ಯದ ಪೊಲೀಸರು ತನಿಖೆ ಮಾಡಬೇಕು ಎಂದು ಒತ್ತಾಯಿಸಿದರು. ಈ ಘಟನೆಯ ಬಗ್ಗೆ ಕೆಲವರು ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಲೋಕಸಭೆಯಲ್ಲಿ ಎರಡನೇ ಬಾರಿ ಈ ರೀತಿಯ ಘಟನೆ ನಡೆಯುತ್ತಿದೆ. 75 ವರ್ಷಗಳಲ್ಲಿ ನಾವು ಪಾಸ್ ಕೊಟ್ಟಿದ್ದೇವೆ. ಅವರೆಲ್ಲರೂ ಹೀಗೆ ಮಾಡಿದ್ದಾರಾ? ಎಂದು ಪ್ರಶ್ನಿಸಿದರು.