ಮಂಡ್ಯ: ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲೆ ವ್ಯಕ್ತಯೊಬ್ಬ ಹಲ್ಲೇ ಮಾಡಿರುವ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮೂಲಗಳ ಪ್ರಕಾರ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ನಡೆದಿದೆ. ಸಾಗರ್ ಎಂಬಾತ ಪೊಲೀಸ್ ಸಿಬ್ಬಂದಿಗೆ ಅವಾಜ್ ಹಾಕಿ ಹಲ್ಲೆ ನಡೆಸಿದ್ದಾನೆ. ಜಮೀನು ವಿವಾದದ ಸಂಬಂಧ ಸಾಗರ್ ವಿರುದ್ಧ ಪಾಂಡವಪುರ ಪೊಲೀಸ್ ಠಾಣೆಗೆ ದೂರು ಬಂದಿತ್ತು. ದೂರಿನ ಹಿನ್ನೆಲೆಯಲ್ಲಿ ಠಾಣೆಗೆ ಸಾಗರಗಳನ್ನು ಪೊಲೀಸರು ಕರೆಸಿದ್ದರು.
Supreme Court Recruitment: ಸುಪ್ರೀಂ ಕೋರ್ಟ್ʼನಲ್ಲಿದೆ ಉದ್ಯೋಗಾವಕಾಶ! ಆಸಕ್ತರು ಇವತ್ತೇ ಅಪ್ಲೈ ಮಾಡಿ
ಈ ವೇಳೆ ಪೊಲೀಸ್ ಪೇದೆ ಅಭಿಷೇಕ್ ಹಾಗೂ ಸಾಗರ್ ನಡುವೆ ಮಾತಿನ ಚಕಮಕಿ ಆಗಿದೆ. ಈ ವೇಳೆ ಪೇದೆ ಅಭಿಷೇಕ್ ಸಾಗರ್ಗೆ ಒಂದು ಏಟು ಹೊಡೆದಿದ್ದಾರೆ. ನಂತರ ಸಾಗರ್ ಪೇದೆ ಅಭಿಷೇಕ್ಗೆ ಅವಾಜ್ ಹಾಕಿ ಹೊಡೆದಿದ್ದಾನೆ. ಹಲ್ಲೆ ನಡೆಸಿದ್ದಲ್ಲದೇ ಪೇದೆ ಕುತ್ತಿಗೆ ಪಟ್ಟಿ ಹಿಡಿದು ಹಲ್ಲೆ ನಡೆಸಿ ಸಾಗರ್ ಪರಾರಿಯಾಗಲು ಯತ್ನಿಸಿದ್ದಾನೆ. ಬಳಿಕ ಸಾಗರ್ ನನ್ನ ವಶಕ್ಕೆ ಪಡೆದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.