ಬೆಳಗಾವಿ:– ಒತ್ತುವರಿಯಾದ ಸರಕಾರಿ ಭೂಮಿ ವಶಕ್ಕೆ ಪಡೆಯಲು ಪ್ರತ್ಯೇಕ ಕೋಶ ರಚನೆಗೆ ಚಿಂತನೆ ನಡೆಸಲಾಗಿದೆ ಎಂದು ಸಚಿವ ಕೃಷ್ಣ ಭೈರೇಗೌಡರು ಹೇಳಿದ್ದಾರೆ.
ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಒತ್ತುವರಿ ಕುರಿತಂತೆ ಕಾಂಗ್ರೆಸ್ ಸದಸ್ಯ ಯು.ಬಿ.ವೆಂಕಟೇಶ್ ಪ್ರಶ್ನೆಗೆ ಉತ್ತರಿಸಿದ ಅವರು, ಒತ್ತುವರಿಯಾಗಿರುವ ಭೂ ತೆರವಿನ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.
ಕಳೆದ ಆರು ತಿಂಗಳಲ್ಲಿ ನೂರಾರು ಕೋಟಿ ಮೌಲ್ಯದ ಸರ್ಕಾರ ಭೂ ಒತ್ತುವರಿಯನ್ನು ತೆರವು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಒತ್ತುವರಿ ತೆರವಿಗೆ ಪ್ರತ್ಯೇಕ ಕೋಶ ರಚಿಸಲಾಗುವುದು, ಅಲ್ಲದೆ, ಸರಕಾರಿ ಆಸ್ತಿಗಳನ್ನು ರಕ್ಷಿಸಲಾಗುವುದು ಎಂದು ಹೇಳಿದ್ದಾರೆ,