ದಕ್ಷಿಣ ಭಾರತದ ಖ್ಯಾತ ಸ್ಟಂಟ್ ಕೊರಿಯೋಗ್ರಾಫರ್ ರಾಮ-ಲಕ್ಷ್ಮಣ (Rama-Laxman) ಜೋಡಿ ಮತ್ತೆ ಕನ್ನಡ ಚಿತ್ರವೊಂದಕ್ಕೆ ಸಾಹಸ ದೃಶ್ಯಗಳನ್ನು ಕಂಪೋಸ್ ಮಾಡುತ್ತಿದೆ. ಧ್ರುವ ಸರ್ಜಾ ನಟನೆ, ಜೋಗಿ ಪ್ರೇಮ್ ನಿರ್ದೇಶನ ಮಾಡುತ್ತಿರುವ ಕೆಡಿ (KD) ಸಿನಿಮಾದ ಸಾಹದ ದೃಶ್ಯವೊಂದಕ್ಕೆ ಈ ಜೋಡಿ ಸ್ಟಂಟ್ ಕೊರಿಯೋಗ್ರಫಿ ಮಾಡುತ್ತಿದೆ. ಈಗಾಗಲೇ ಚಿತ್ರೀಕರಣದಲ್ಲೂ ಇವರ ತೊಡಗಿಕೊಂಡಿದ್ದಾರೆ.
ಇದೇ ತಂಡದಿಂದ ಮತ್ತೊಂದು ತಾಜಾ ಸುದ್ದಿ ಬಂದಿದ್ದು, ಈ ಸಿನಿಮಾದಲ್ಲಿ ಧ್ರುವ ಸರ್ಜಾ ಅವರ ಅಣ್ಣನಾಗಿ ರಮೇಶ್ ಅರವಿಂದ್ ನಟಿಸಲಿದ್ದಾರೆ. ಸದ್ಯದಲ್ಲೇ ತಮ್ಮ ಭಾಗದ ಚಿತ್ರೀಕರಣದಲ್ಲೂ ಅವರು ಭಾಗಿಯಾಗಲಿದ್ದಾರೆ. ತಾರಾಗಣದ ಕಾರಣದಿಂದಾಗಿಯೇ ಈ ಸಿನಿಮಾ ಕುತೂಹಲ ಮೂಡಿಸಿದ್ದು, ರವಿಚಂದ್ರನ್, ಸಂಜಯ್ ದತ್, ಶಿಲ್ಪಾ ಶೆಟ್ಟಿ ಹೀಗೆ ಹೆಸರಾಂತ ಕಲಾವಿದರೇ ತಾರಾಗಣದಲ್ಲಿದ್ದಾರೆ.
ಈ ಹಿಂದೆ ತಮ್ಮದೇ ಸಿನಿಮಾದಲ್ಲಿ ನಟಿಸಿದ್ದ ರೀಷ್ಮಾ ನಾಣಯ್ಯ (Reeshma Nanaiah) ಅವರಿಗೆ ಮತ್ತೊಂದು ಅವಕಾಶ ನೀಡಿದ್ದಾರೆ ಪ್ರೇಮ್. ಕೆಡಿ ಸಿನಿಮಾದಲ್ಲಿ ರೀಷ್ಮಾ ಅವರು ಮಚ್ಲಕ್ಷ್ಮೀ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸೂಪರ್ ಸ್ಟಾರ್ಗಳಿರುವ ತಾರಾಗಣ ಅಂದ್ರೆ ಅದು ಕೆಡಿ ಸಿನಿಮಾ. ಧ್ರುವ ಸರ್ಜಾ, ರವಿಚಂದ್ರನ್, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ (Shilpa Shetty) , ಸಂಜಯ್ ದತ್ (Sanjay Dutt), ಹೀಗೆ ಸ್ಟಾರ್ಗಳನ್ನ ಸ್ಟಾರ್ ಡೈರೆಕ್ಟರ್ ನಿರ್ದೇಶಕ ಪ್ರೇಮ್ ನಿರ್ದೇಶನ ಮಾಡ್ತಿದ್ದಾರೆ. ವಿಭಿನ್ನ ಕಥೆ ಹೊತ್ತು, ಪ್ಯಾನ್ ಇಂಡಿಯಾ ಸಿನಿಮಾ ಹೊತ್ತು ತರುತ್ತಿದ್ದಾರೆ.