ಅಗಲಿದ ಕನ್ನಡದ ಹಿರಿಯ ನಟಿ ಲೀಲಾವತಿ (Leelavati) ಅವರ ನಿಧನಕ್ಕೆ ಮಂಡ್ಯ ಸಂಸದೆ ಮತ್ತು ನಟಿ ಸುಮಲತಾ ಅಂಬರೀಶ್ (Sumalatha Ambarish) ಕಂಬನಿ ಮಿಡಿದಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತು ಬರೆದುಕೊಂಡಿರುವ ಅವರು, ಅವರೊಂದಿಗಿನ ಒಡನಾಟವನ್ನು ನೆನಪಿಸಿಕೊಂಡಿದ್ದಾರೆ. ಜೊತೆಗೆ ಅವರ ಜೊತೆ ನಟಿಸಿರುವ ಸಿನಿಮಾದ ಕುರಿತು ಹೇಳಿಕೊಂಡಿದ್ದಾರೆ.
ಕನ್ನಡದ ಹೆಸರಾಂತ ಹಿರಿಯ ನಟಿ ಡಾ.ಲೀಲಾವತಿ ಅವರ ನಿಧನದ (Death) ಸುದ್ದಿ ತೀವ್ರ ಆಘಾತ ತಂದಿದೆ. ದಕ್ಷಿಣದ ಸಿನಿಮಾ ರಂಗಕ್ಕೆ ಇದು ತುಂಬಲಾರದ ನಷ್ಟ. ಆರನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಲೀಲಾವತಿ ಅವರು ನಾನಾ ಭಾಷೆಗಳಲ್ಲಿ ನಟಿಸುವ ಮೂಲಕ ದಕ್ಷಿಣ ಯಶಸ್ವಿ ನಟಿಯಾಗಿದ್ದರು.
ಅವರೊಂದಿಗೆ ನನಗೂ ಕಥಾನಾಯಕ ಸಿನಿಮಾದಲ್ಲಿ ಪಾತ್ರ ಮಾಡಲು ಅವಕಾಶ ಸಿಕ್ಕಿತ್ತು ಎಂದು ಸುಮಲತಾ ಸೋಷಿಯಲ್ ಮೀಡಿಯಾದಲ್ಲಿ ಬರೆದಿದ್ದಾರೆ. ಅಗಲಿಕೆ ನೋವನ್ನು ಭರಿಸುವಂತಹ ಶಕ್ತಿಯನ್ನು ಲೀಲಾವತಿ ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ಭಗವಂತ ನೀಡಲಿ ಎಂದು ಪ್ರಾರ್ಥಿಸುವೆ ಎಂದು ಅವರು ಹೇಳಿದ್ದಾರೆ.