ದಾವಣಗೆರೆ:- ಮುಸ್ಲಿಮರು ದಾಂಧಲೆ ಮಾಡೋಕೆ ಇದು ಪಾಕ್, ಬಾಂಗ್ಲಾ ಅಲ್ಲ ಹುಷಾರಾಗಿರಿ ಎಂದು ಪ್ರಮೋದ್ ಮುತಾಲಿಕ್ ಎಚ್ಚರಿಕೆ ಕೊಟ್ಟಿದ್ದಾರೆ.
ಜಾಗತಿಕ ಹೂಡಿಕೆದಾರರ ಸಮಾವೇಶ: 12 ವಿಶೇಷ ಹೂಡಿಕೆ ವಲಯ ಸ್ಥಾಪನೆ: ಎಂ ಬಿ ಪಾಟೀಲ!
ಈ ಸಂಬಂಧ ಮಾತನಾಡಿದ ಅವರು, ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ನಡೆದ ಕಲ್ಲು ತೂರಾಟದ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಈ ವೇಳೆ, ತಪ್ಪು ಮಾಡಿದ್ದರೆ ಅದಕ್ಕೆ ಶಿಕ್ಷೆ ನೀಡಲು ಕಾನೂನು, ಸಂವಿಧಾನ ಇದೆ. ನೀವು ಬೇಕಾದರೆ ದೂರು ನೀಡಬೇಕಿತ್ತು. ಇಲ್ಲವೇ ಧರಣಿ ಮಾಡಬೇಕಿತ್ತು ಅದನ್ನು ಬಿಟ್ಟು ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಮಾಡೋದು, ಪೊಲೀಸರಿಗೆ ಕಲ್ಲು ಹೊಡೆಯುವುದನ್ನು ಬಿಡಬೇಕು ಎಂದಿದ್ದಾರೆ.
ಉದಯಗಿರಿ ಮುಸ್ಲಿಮರೇ ಜಾಸ್ತಿ ಇರುವ ಏರಿಯಾವಾಗಿದ್ದು, ಅಲ್ಲಿ ಈ ಘಟನೆ ನಡೆದಿದೆ. ತಪ್ಪು ಮಾಡಿದವನನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಕಾನೂನು ಇದೆ ಸಂವಿಧಾನ ಇದೆ ತಪ್ಪಿತಸ್ಥನಿಗೆ ಶಿಕ್ಷೆ ಆಗುತ್ತದೆ. ಅದನ್ನು ಬಿಟ್ಟು ಕಲ್ಲು ತೂರಾಟ ನಡೆಸಿ ದಾಂಧಲೆ ನಡೆಸಿದ್ದು ಎಷ್ಟು ಸರಿ. ಇದು ಪಾಕಿಸ್ತಾನ, ಅಪಘಾನಿಸ್ತಾನ, ಬಾಂಗ್ಲಾ ದೇಶ ಅಲ್ಲ. ನಿಮಗೆ ಏನು ತೊಂದರೆಯಾಗಿದೆ ಎಂದು ದೂರು ನೀಡಿ, ಧರಣಿ ಮಾಡಿ ಎಂದು ಸಲಹೆ ನೀಡಿದ್ದಾರೆ.