ಬೆಳಗಾವಿ: ಬೆಳಗಾವಿ ಅಧಿವೇಶನದಲ್ಲಿ ಸರ್ಕಾರವನ್ನ ಕಟ್ಟಿಹಾಕಲು ವಿಪಕ್ಷ ಬಿಜೆಪಿ ಸಜ್ಜಾಗಿದೆ. ಆದ್ರೆ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ವಪಕ್ಷಕ್ಕೆ ವಿಪಕ್ಷದಂತಾಗಿದ್ದಾರೆ. ರಾಜ್ಯಾಧ್ಯಕ್ಷ ಅಥವಾ ವಿಪಕ್ಷ ನಾಯಕ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನ ಗೊಂಡಿರುವ ಕೆಲ ಬಿಜೆಪಿ ಶಾಸಕರು ದೆಹಲಿಗೆ ತೆರಳಲು ಸಜ್ಜಾಗಿದ್ದಾರೆ. ಈ ಪಟ್ಟಿಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಹೆಸರು ಸಹ ಇದೆ. ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಯತ್ನಾಳ್, ದೆಹಲಿಗೆ ಹೋಗುವುದು ನಿಶ್ಚಿತ, ಖಚಿತ. ಆದ್ರೆ, ಉಚಿತ ಮಾತ್ರ ಅಲ್ಲ, ಹಣ ಕೊಟ್ಟು ಟಿಕೆಟ್ ಪಡೆದು ಹೋಗಬೇಕು ಎಂದರು.
ಬೆಂಗಳೂರಿನಲ್ಲಿ ನ್ಯಾಚುರಲ್ ಸ್ಟಾರ್… ‘ಹಾಯ್ ನಾನ್ನ’ ಪ್ರಮೋಷನ್ ನಲ್ಲಿ ನಾನಿ ಬ್ಯುಸಿ
ಬೆಳಗಾವಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ನಾನಾಗಿಯೇ ದೆಹಲಿಗೆ ಹೋಗಲ್ಲ, ಕರೆ ಬಂದ ಮೇಲೆ ಹೋಗುತ್ತೇನೆ. ಯಾವಾಗ ಕರೆ ಬರುತ್ತದೆಯೋ ಆಗ ದೆಹಲಿಗೆ ಹೋಗುತ್ತೇನೆ. ಶಾಸಕ ರಮೇಶ್ ಜಾರಕಿಹೊಳಿ ಸೇರಿದಂತೆ ಹಲವರಿಗೆ ಹೇಳಿರಬಹುದು. ಇಬ್ಬರು ಮಹಾನುಭಾವರಿಂದ ಕರ್ನಾಟಕದಲ್ಲಿ ಈ ಪರಿಸ್ಥಿತಿ ಬಂದಿದೆ. ದೆಹಲಿಯ ಒಬ್ಬರು, ಕರ್ನಾಟಕ ಒಬ್ಬರು ಇದ್ದಾರೆ ಎಂದು ಸ್ವಪಕ್ಷದ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸಿದರು.