ಟೀಮ್ ಇಂಡಿಯಾಗೆ ಆಘಾತ ಎದುರಾಗಿದ್ದು, ಪ್ರಮುಖ ಆಲ್ರೌಂಡರ್ ಶಿವಂ ದುಬೆ ತಂಡದಿಂದ ಹೊರಗುಳಿದಿದ್ದಾರೆ.
ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಶಿವಂ ದುಬೆ ಬಾಂಗ್ಲಾದೇಶ್ ವಿರುದ್ಧದ ಟಿ20 ಸರಣಿಯಿಂದ ಹಿಂದೆ ಸರಿದಿದ್ದಾರೆ. ಇದಕ್ಕೂ ಮುನ್ನ ಅವರು ಇರಾನಿ ಕಪ್ ಪಂದ್ಯಕ್ಕೆ ಆಯ್ಕೆಯಾಗಿದ್ದರು. ಆದರೆ ಬೆನ್ನು ನೋವಿನ ಕಾರಣ ಅವರು ಶೇಷ ಭಾರತ ತಂಡದ ಪರ ಕಣಕ್ಕಿಳಿದಿರಲಿಲ್ಲ.
Navratri 2024 4th Day: ನವರಾತ್ರಿ 4ನೇ ದಿನ ಕೂಷ್ಮಾಂಡ ದೇವಿ ಮುಹೂರ್ತ, ಪೂಜೆ ವಿಧಾನ, ಮಂತ್ರ ಹೀಗಿರಲಿ!
ಇದೀಗ ಈ ನೋವಿನ ಸಮಸ್ಯೆಯಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ ಮೂರು ಪಂದ್ಯಗಳ ಟಿ20 ಸರಣಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಹೀಗಾಗಿ ಬಾಂಗ್ಲಾದೇಶ್ ವಿರುದ್ಧದ ಟಿ20 ಸರಣಿಯಲ್ಲಿ ಶಿವಂ ದುಬೆ ಕಾಣಿಸಿಕೊಳ್ಳುವುದಿಲ್ಲ.
ಇನ್ನು ಶಿವಂ ದುಬೆ ಅವರ ಬದಲಿಯಾಗಿ ಟೀಮ್ ಇಂಡಿಯಾಗೆ ತಿಲಕ್ ವರ್ಮಾ ಆಯ್ಕೆಯಾಗಿದ್ದಾರೆ. ಭಾರತದ ಪರ 16 ಟಿ20 ಪಂದ್ಯಗಳನ್ನಾಡಿರುವ ತಿಲಕ್ 2 ಅರ್ಧಶತಕಗಳೊಂದಿಗೆ 336 ರನ್ ಕಲೆಹಾಕಿದ್ದಾರೆ. ಹೀಗಾಗಿ ಎಡಗೈ ದಾಂಡಿಗನನ್ನು ಬಾಂಗ್ಲಾದೇಶ್ ವಿರುದ್ಧದ ಸರಣಿಗೆ ಆಯ್ಕೆ ಮಾಡಲಾಗಿದೆ.