ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಸಿಎಂ, ಡಿಸಿಎಂ ಹಾಗೂ ಮಂತ್ರಿಗಳಿಗೆ ಟಾರ್ಗೆಟ್ ಕೊಟ್ಟಿದ್ದಾರೆ. ಯಾರು ಹೆಚ್ಚಿಗೆ ಹಣ ಕೊಡುತ್ತಾರೆ ಅವರು ಮಂತ್ರಿ ಸ್ಥಾನದಲ್ಲಿ ಮುಂದುವರೆಯುತ್ತಾರೆ. ಯಾರು ಕೊಡಲ್ಲಾ ಅವರು ಮಂತ್ರಿಗಳಾಗುವುದಿಲ್ಲ. ಹೆಚ್ಚು ಹಣ ಕೊಟ್ಟು ಅವರು ಅಧಿಕಾರದಲ್ಲಿ ಇರುತ್ತಾರೆ. ಯಾವುದೆ ಪವರ್ ಶೇರಿಂಗ್ ಇಲ್ಲ. ಯಾರು ಹಣ ಕೊಡುತ್ತಾರೆ ಅವರು ಅಧಿಕಾರದಲ್ಲಿ ಇರುತ್ತಾರೆ. ಈಗಾಗಲೇ ಹೈಕಮಾಂಡ್ ಇದನ್ನೇ ಹೇಳಿದೆ ಎಂದು ಹೆಚ್ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದರು.
ಬೆಂಗಳೂರಿನಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಗ್ಯಾರಂಟಿಗಳನ್ನು ಮಾಡೆಲ್ ಆಗಿ ಇಟ್ಟುಕೊಂಡು ಪಂಚರಾಜ್ಯ ಚುನಾವಣೆಯಲ್ಲಿ ಜಾರಿಗೆ ತರಲು ಮುಂದಾಗಿರುವುದನ್ನು ಗಮನಿಸಿದ್ದಾನೆ. ಆ ಯೋಜನೆಗಳು ಇಲ್ಲಿ ಎಷ್ಟರ ಮಟ್ಟಿಗೆ ಯಶಸ್ವಿಯಾಗಿ ಜಾರಿಯಾಗಿದೆ ಎಂಬುದನ್ನು ಜನರ ಗಮನಕ್ಕೆ ತರುತ್ತೇನೆ. 5 ರಾಜ್ಯಗಳ ಮತದಾರರು ಇದಕ್ಕೆ ಮರುಳಾಗಬಾರದು ಎಂದು ಅವರು ಹೇಳಿದ್ದಾರೆ.