ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಗ್ಯಾರಂಟಿ ಸರ್ಕಾರದಿಂದ ಮತ್ತೊಂದು ದಂಡ ಪ್ರಯೋಗ ಮಾಡಲಾಗಿದೆ.
School Visit: ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸಿಎಂ ಸಪ್ರೈಸ್ ವಿಸಿಟ್: ಮಕ್ಕಳಿಗೆ ವ್ಯಾಕರಣ ಪಾಠ ಮಾಡಿದ ಸಿದ್ದು!
ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ (Tushar Girinath), ಎಲ್ಲೆಂದರಲ್ಲಿ ಕಸ ಬಿಸಾಡುವವರಿಗೆ ದಂಡ ಪ್ರಯೋಗ ಮಾಡಲಾಗುತ್ತದೆ. ಎಲ್ಲೆಂದರಲ್ಲಿ ಕಸ ಮತ್ತು ಸ್ವಚ್ಛತೆ ಕಾಪಾಡದವರಿಗೆ ದಂಡದ ಮೊತ್ತ 50 ರೂ. ನಿಂದ 500 ರೂ. ವರೆಗೆ ಏರಿಕೆ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ಈ ಕುರಿತು ಆರೋಗ್ಯ ಇಲಾಖೆ ಸದ್ಯದಲ್ಲೇ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಿಗೂ ಆದೇಶ ಹೊರಡಿಸಲಿದೆ. ನಿನ್ನೆ ಆರೋಗ್ಯ ಸಚಿವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ ಎಂದರು