ಉತ್ತರ ಪ್ರದೇಶ: ಪ್ರತಿಯೊಂದಕ್ಕೆ ಗೂಗಲ್ ಮೇಲೆ ಡಿಪೆಂಡ್ ಆಗಿದ್ದಾರೆ. ಹಾಕೋ ಬಟ್ಟೆ, ತಿನ್ನೋ ಊಟ, ಹೋಗೋ ಜಾಗ ಎಲ್ಲವೂ ಗೂಗಲ್ನಲ್ಲೇ ಹುಡುಕಿ ಬಳಸ್ತಾನೆ. ಎಲ್ಲಾದರೂ ಹೊಸ ಜಾಗದಲ್ಲಿ ಓಡಾಡಬೇಕು ಅಂದ್ರು ಕೂಡ ಯಾರನ್ನೂ ವಿಳಾಸ ಕೇಳೋಕೆ ಹೋಗಲ್ಲ. ಗೂಗಲ್ ಮ್ಯಾಪ್ ಹಾಕ್ಕೋಂಡು ಸ್ಟ್ರೈಟ್ ಆಗಿ ಹೋಗ್ತಿರೋದೇ. ಹೀಗೆಗೂಗಲ್ ಮ್ಯಾಪ್ ನಂಬಿ ಮೂವರು ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ.
ಕಾರಿನಲ್ಲಿದ್ದ ಮೂವರು ಗೂಗಲ್ ಮ್ಯಾಪ್ ಬಳಸಿಕೊಂಡು ತೆರಳುತ್ತಿದ್ದರು. ಸೇತುವೆ ಸಂಪೂರ್ಣ ನಿರ್ಮಾಣವಾಗಿರದ ಕಾರಣ ಕಾರು ಮಧ್ಯದಲ್ಲಿ ನದಿಗೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಫರೂಕಾಬಾದ್ನ ವಿವೇಕ್ ಕುಮಾರ್ ಮತ್ತು ಅಮಿತ್ ಎಂದು ಗುರುತಿಸಲಾಗಿದೆ. ಇನ್ನೊಬ್ಬನ ಗುರುತು ಪತ್ತೆಯಾಗಿಲ್ಲ. ಆತನ ಪತ್ತೆ ಹಚ್ಚುವ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಇಬ್ಬರು ಸಹೋದರರು ಹಾಗೂ ಮತ್ತೋರ್ವ ಬರೇಲಿಯಿಂದ ಬದೌನ್ ಜಿಲ್ಲೆಯ ದತಗಂಜ್ಗೆ ತೆರಳುತ್ತಿದ್ದರು.
ರೈತರ ಗಮನಕ್ಕೆ.. ಪಿಎಂ ಕಿಸಾನ್ ಯೋಜನೆಯಲ್ಲಿ ಹೊಸ ರೂಲ್ಸ್.! ಈ ಕೆಲಸ ಮಾಡದಿದ್ರೆ ಬರಲ್ಲ 19ನೇ ಕಂತಿನ ಹಣ!?
ಈ ವೇಳೆ ಫರೀದ್ಪುರದಲ್ಲಿ ರಾಮಗಂಗಾ ನದಿಯ ಮೇಲೆ ನಿರ್ಮಾಣ ಹಂತದ ಸೇತುವೆಯಿಂದ 50 ಅಡಿ ಕೆಳಗೆ ಬಿದ್ದಿದೆ. ಇದನ್ನು ಗಮನಿಸಿದ ಗ್ರಾಮಸ್ಥರು ಕಾರನ್ನು ನದಿಯಿಂದ ಹೊರತೆಗೆದಿದ್ದಾರೆ. ಅಷ್ಟರಲ್ಲೇ ಅದರಲ್ಲಿದ್ದ ಮೂವರು ಸಾವಿಗೀಡಾಗಿದ್ದರು. ಈ ವರ್ಷ ಉಂಟಾದ ಪ್ರವಾಹದಿದ ಸೇತುವೆಯ ಕುಸಿದಿತ್ತು. ಸೇತುವೆಯನ್ನು ಮರು ನಿರ್ಮಾಣ ಮಾಡುವ ಕಾರ್ಯ ನಡೆಯುತ್ತಿದೆ. ಇದು GPS ನಲ್ಲಿ ನವೀಕರಿಸಲಾಗಿಲ್ಲ. ಇದರಿಂದ ಚಾಲಕನ ಗಮನಕ್ಕೆ ಬಂದಿಲ್ಲ. ಇದರಿಂದ ಈ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.