ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ರಾಜೀನಾಮೆಗೆ ಒತ್ತಾಯಿಸಿ ಭಾರತೀಯ ರಿಸರ್ವ್ ಬ್ಯಾಂಕ್ಗೆ (RBI) ಬೆದರಿಕೆ ಇಮೇಲ್ (Threat Email) ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ (Mumbai) ಕ್ರೈಂ ಬ್ರಾಂಚ್ ಮೂವರನ್ನು ವಶಕ್ಕೆ ಪಡೆದಿದೆ. ಗುಜರಾತ್ನ (Gujarat) ವಡೋದರಾದಿಂದ ಮೂವರನ್ನು ವಶಕ್ಕೆ ಪಡೆಯಲಾಗಿದೆ.
ವಶಕ್ಕೆ ಪಡೆದವರಲ್ಲಿ ಒಬ್ಬನನ್ನು ಆದಿಲ್ ರಫಿಗ್ ಎಂದು ಗುರುತಿಸಲಾಗಿದ್ದು, ಇನ್ನೊಬ್ಬ ಆತನ ಸಂಬಂಧಿ ಹಾಗೂ ಮತ್ತೋರ್ವ ವ್ಯಕ್ತಿ ಅವನ ಸ್ನೇಹಿತ ಎಂದು ತಿಳಿದುಬಂದಿದೆ. ಬೆದರಿಕೆ ಇಮೇಲ್ಗಳ ಹಿಂದಿನ ಉದ್ದೇಶವನ್ನು ಕಂಡುಹಿಡಿಯುವ ಸಲುವಾಗಿ ಪೊಲೀಸರು ವಶಕ್ಕೆ ಪಡೆದವರನ್ನು ವಿಚಾರಣೆ ನಡೆಸುತ್ತಿದ್ದಾರೆ. ಅಲ್ಲದೇ ಇಮೇಲ್ಗಳನ್ನು ಕಳುಹಿಸಲು ಬಳಸುವ ಸಾಧನವನ್ನು ಸಹ ಪರಿಶೀಲಿಸಲಾಗುತ್ತಿದೆ.
ಹೆಚ್ಚುತ್ತಲೇ ಇದೆ PM ಮೋದಿ ಕ್ರೇಜ್ – 2 ಕೋಟಿ ಚಂದಾದಾರರ ಸಂಖ್ಯೆ ದಾಟಿತು ಯೂಟ್ಯೂಬ್ ಚಾನೆಲ್
ಭಾರತೀಯ ರಿಸರ್ವ್ ಬ್ಯಾಂಕ್ಗೆ ಬಂದಿರುವ ಬೆದರಿಕೆ ಇಮೇಲ್ನಲ್ಲಿ ಐಸಿಐಸಿಐ ಬ್ಯಾಂಕ್ ಮತ್ತು ಎಚ್ಡಿಎಫ್ಸಿ ಬ್ಯಾಂಕ್ ಕಚೇರಿಗಳ ಜೊತೆಗೆ ಅದರ ಕಚೇರಿ ಮೇಲೆ ದಾಳಿ ನಡೆಸಲಾಗುವುದು ಎಂದು ಬೆದರಿಕೆಯೊಡ್ಡಲಾಗಿತ್ತು. ಮುಂಬೈನ ವಿವಿಧ ಸ್ಥಳಗಳಲ್ಲಿ 11 ಬಾಂಬ್ಗಳನ್ನು ಇರಿಸಲಾಗಿದೆ ಮತ್ತು ಸೀತಾರಾಮನ್ ಮತ್ತು ಶಕ್ತಿಕಾಂತ್ ದಾಸ್ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡದಿದ್ದರೆ ಬುಧವಾರ ಮಧ್ಯಾಹ್ನ 1:30 ರಿಂದ ಒಂದರ ನಂತರ ಒಂದರಂತೆ ಬಾಂಬ್ ಸ್ಫೋಟಿಸಲಾಗುವುದು ಎಂದು ಬೆದರಿಕೆ ಮೇಲ್ನಲ್ಲಿ ಉಲ್ಲೇಖಿಸಲಾಗಿದೆ.