ಬೆಂಗಳೂರು:- ಬೆಂಗಳೂರು ಶಾಲೆಗಳಿಗೆ ಬೆದರಿಕೆ ಕೇಸ್ ಗೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಬೆಂಗಳೂರಿನ ಕೆಲವು ಶಾಲೆಗಳಿಗೆ ಬಂದಿರುವ ಬಾಂಬ್ ಬೆದರಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದರು.
ನಮಗೆ ಮಕ್ಕಳ ಸುರಕ್ಷತೆ ಮುಖ್ಯ. ಹೀಗಾಗಿ ಬೆದರಿಕೆ ಸಂದೇಶವನ್ನು ನಿರ್ಲಕ್ಷಿಸಿಲ್ಲ. ನಾನು ಬೆಂಗಳೂರು ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದೇನೆ. ಮಾಹಿತಿ ಪಡೆದಿದ್ದೇನೆ’ ಎಂದರು.
‘ಈ ಹಿಂದೆ ಯಾವುದೋ ಒಂದು ಶಾಲೆಗೆ ಬೆದರಿಕೆ ಕರೆ ಇಲ್ಲವೇ ಸಂದೇಶ ಬರುತ್ತಿತ್ತು. ಈಗ ಒಂದೇ ಬಾರಿ ಹಲವು ಶಾಲೆಗಳಿಗೆ ಸಂದೇಶ ಕಳುಹಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ. ಈ ಹಂತದಲ್ಲಿ ಹೆಚ್ಚಿನ ಮಾಹಿತಿ ಬಹಿರಂಗಪಡಿಸಲು ಆಗುವುದಿಲ್ಲ. ಶೀಘ್ರ ಆರೋಪಿಗಳನ್ನು ಪೊಲೀಸರು ಬಂಧಿಸಲಿದ್ದಾರೆ ಎಂದರು.