ಬಾಲಿವುಡ್ ನಟ ಶಾರುಖ್ ಖಾನ್ ಕಳೆದ ಎರಡು ದಿನಗಳ ಹಿಂದೆ ಜೀವ ಬೆದರಿಕೆ ಕರೆ ಬಂದಿದೆ. ರಾಯ್ಪುರ ಮೂಲದ ವಕೀಲರೊಬ್ಬರ ಫೋನ್ನಿಂದ ಕೊಲೆ ಬೆದರಿಕೆ ಕರೆ ಬಂದಿರುವುದಾಗಿ ಮುಂಬೈ ಪೊಲೀಸರು ತಿಳಿಸಿದ್ದಾರೆ.
ವಕೀಲ ಫೈಜಾನ್ ಖಾನ್ ಎಂಬವರ ಫೋನ್ನಿಂದ ಶಾರುಖ್ ಖಾನ್ ಅವರಿಗೆ ಬೆದರಿಕೆ ಬಂದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಕೀಲ ಶಾರುಖ್ ಖಾನ್ ಅವರಿಗೆ ಬೆದರಿಕೆ ಕರೆ ಬರುವ 3 ದಿನಗಳ ಮೊದಲು ತನ್ನ ಫೋನ್ ಕಳ್ಳತನವಾಗಿದೆ. ಈ ಬಗ್ಗೆ ಎಫ್ಐಆರ್ ದಾಖಲಿಸಿದ್ದೇನೆ ಎಂದಿದ್ದಾರೆ.
ಮಂಗಳವಾರ ಬಾಂದ್ರಾ ಪೊಲೀಸ್ ಠಾಣೆಯ ಫೋನ್ಗೆ ಕರೆ ಮಾಡಿ ಬೆದರಿಕೆ ಹಾಕಲಾಗಿತ್ತು. ಕರೆ ಮಾಡಿದ್ದ ವ್ಯಕ್ತಿ ನಟನಿಂದ 50 ಲಕ್ಷ ರೂ. ಬೇಡಿಕೆಯಿಟ್ಟಿದ್ದ. ಆ ಹಣವನ್ನು ನೀಡದಿದ್ದರೆ ಭಾರೀ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಲಾಗಿತ್ತು.
ಈ ಬಗ್ಗೆ ಹೆಚ್ಚಿನ ತನಿಖೆಗಾಗಿ ಮುಂಬೈ ಪೊಲೀಸ್ ತಂಡ ರಾಯ್ಪುರಕ್ಕೆ ತೆರಳಿತ್ತು. ಇದೀಗ ರಾಯ್ಪುರ ಪೊಲೀಸರೊಂದಿಗೆ ವಕೀಲನ ಫೋನ್ ಕಳ್ಳತನದ ಬಗ್ಗೆ ಮಾಹಿತಿ ಪಡೆಯಲಾಗಿದೆ. ಬೆದರಿಕೆ ಹಾಕಿದವರ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.