ಬೆಂಗಳೂರು:– ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನನ್ನ ಆರೋಗ್ಯದ ಬಗ್ಗೆ ಮಾಧ್ಯಮಗಳಲ್ಲಿ ಬರುತ್ತಿರುವ ವದಂತಿ ನಂಬಬೇಡಿ: ಸುರೇಶ್ ಕುಮಾರ್!
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ,ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ,ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಮಳೆಯಾಗಲಿದೆ.
ಕ್ಯಾಸಲ್ರಾಕ್, ಬೀದರ್, ಭಾಲ್ಕಿ, ಆಗುಂಬೆ, ಗಬ್ಬೂರು, ರಾಯಚೂರು, ಶೋರಾಪುರ, ಗೇರುಸೊಪ್ಪ, ಲೋಂಡಾ, ಮುನ್ನಳ್ಳಿ, ಸಿದ್ದಾಪುರ, ಧರ್ಮಸ್ಥಳ, ಕಲಘಟಗಿ, ಕವಡಿಮಟ್ಟಿ, ದೇವದುರ್ಗ, ದೇವರಹಿಪ್ಪರಗಿ, ಔರಾದ್, ಸಿಂಧನೂರು, ಶೃಂಗೇರಿ, ಮಂಕಿ, ಕದ್ರಾ, ಬೆಳ್ತಂಗಡಿ, ಹಳಿಯಾಳದಲ್ಲಿ ಮಳೆಯಾಗಿದೆ.
ಉಡುಪಿ, ಕಾರ್ಕಳ, ಶಾಹಪುರ, ಕಮ್ಮರಡಿ, ಕೊಪ್ಪ, ಎನ್ಆರ್ಪುರ, ಗೋಕರ್ಣ, ಹೊನ್ನಾವರ, ಧಾರವಾಡ, ಕುಂದಗೋಳ, ಕುರ್ಡಿ, ಕೂಡಲಸಂಗಮ, ಹುಬ್ಬಳ್ಳಿ, ಮಾನ್ವಿ, ಕೂಡಲಸಂಗಮ, ಜಯಪುರ, ಕೊಟ್ಟಿಗೆಹಾರ, ಕಳಸದಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುತ್ತಿದೆ, ಎಚ್ಎಎಲ್ನಲ್ಲಿ 29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.