ಮಂಡ್ಯ:ನೀರಿನಲ್ಲಿ ಆಟವಾಡುವ ವೇಳೆ KRS ಡ್ಯಾಂ ಹಿನ್ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ KRS ಡ್ಯಾಂ ನಲ್ಲಿ ನಡೆದಿದೆ.
ಹರೀಶ್, ನಂಜುಂಡ ಹಾಗೂ ಜ್ಯೋತಿ ಮೃತ ದುರ್ದೈವಿಗಳಾಗಿದ್ದು ಮೂವರು ಮೃತರು ಮೈಸೂರಿನ ಕಾರುಣ್ಯ ಟ್ರಸ್ಟ್ ಸಿಬ್ಬಂದಿಗಳಾಗಿರುತ್ತಾರೆ.ರಜೆ ಹಿನ್ನೆಲೆಯಲ್ಲಿ ಪ್ರವಾಸಕ್ಕೆಂದು ಬಂದಿದ್ದ 25 ಮಂದಿ ಸಿಬ್ಬಂದಿ ಹಿನ್ನೀರಿನಲ್ಲಿ ಆಟವಾಡುವಾಗ ಮುಳುಗಿದ್ದ ಮೂವರು.
ಪೊಲೀಸರು ಹಾಗೂ ಅಗ್ನಿ ಶಾಮಕ ಸಿಬ್ಬಂದಿಯಿಂದ ಮೃತದೇಹ ಮೇಲೆತ್ತುವ ಕಾರ್ಯ. ಮೂವರ ಪೈಕಿ ಇಬ್ಬರು ಮೃತದೇಹ ಪತ್ತೆ, ಮತ್ತೊಬ್ಬನ ಮೃತದೇಹಕ್ಕಾಗಿ ಮುಂದುವರಿದ ಶೋಧ ಕಾರ್ಯ