ಚಾಮರಾಜನಗರ:-ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ದುರ್ಮರಣ ಹೊಂದಿದ ಘಟನೆ ಗುಂಡ್ಲುಪೇಟೆ ಪಟ್ಟಣದ ಹೊರ ವಲಯದ ಕೇರಳ ರಸ್ತೆಯಲ್ಲಿ ಜರುಗಿದೆ.
ಟಿಪ್ಪರ್ ಹರಿದು ಕೇರಳ ಮೂಲದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಘಟನೆ ಜರುಗಿದೆ. ಮೃತ ದುರ್ದೈವಿಗಳನ್ನು ಪತಿ ದನೇಶ್, ಪತ್ನಿ ಅಂಜು ಹಾಗೂ ಮಗ ಇಶಾನ್ ಕೃಷ್ಣ ಎಂದು ಗುರುತಿಸಲಾಗಿದೆ.
ಮೂವರು ಒಂದೇ ಬೈಕ್ನಲ್ಲಿ ಕೇರಳದಿಂದ ಗುಂಡ್ಲುಪೇಟೆ ಕಡೆಗೆ ಬೈಕ್ನಲ್ಲಿ ಬರುತ್ತಿದ್ದರು.
ಈ ವೇಳೆ ಕೂತನೂರು ಗುಡ್ಡದಿಂದ ಕಲ್ಲು ತುಂಬಿಕೊಂಡು ಬರುತ್ತಿದ್ದ ಕೆ.ಎ.11-ಬಿ 8497 ನೋಂದಣಿಯ ಟಿಪ್ಪರ್ ವಾಹನ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.