ಬೆಂಗಳೂರು:- ಕಾಡಂಚಿನ ಗ್ರಾಮಗಳಿಗೆ ಹಗಲು ಹೊತ್ತಿನಲ್ಲಿ ಮಾತ್ರ ತ್ರೀ ಫೇಸ್ ವಿದ್ಯುತ್ ಒದಗಿಸಲು ಕ್ರಮ ಕೈಗೊಳ್ಳಬೇಕೆಂದು ಸಚಿವ ಈಶ್ವರ್ ಖಂಡ್ರೆ ಅವರು ಸೂಚನೆ ನೀಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ರಾಜ್ಯಾದ್ಯಂತ ಕಾಡಿನಂಚಿನಲ್ಲಿರುವ ಪ್ರದೇಶಗಳಿಗೆ ಆನೆ, ಹುಲಿ, ಚಿರತೆ ಸೇರಿದಂತೆ ಹಲವು ಕಾಡು ಪ್ರಾಣಿಗಳು ಬರುತ್ತಿರುವ ಹಿನ್ನೆಲೆ ಹೆಚ್ಚು ಪ್ರಾಣ ಹಾನಿ ಸಂಭವಿಸುತ್ತಿವೆ. ರಾತ್ರಿಯ ವೇಳೆ ತ್ರೀ ಫೇಸ್ ವಿದ್ಯುತ್ ಪೂರೈಕೆ ಮಾಡಿದರೆ ರೈತರು ಪಂಪ್ ಸೆಟ್ ಆನ್ ಮತ್ತು ಆಫ್ ಮಾಡಲು ಜಮೀನುಗಳಿಗೆ ಸಂಚರಿಸುವ ಕಾರಣ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಇದರಿಂದಾಗಿ ಬೆಳಗಿನ ಹೊತ್ತು ತ್ರೀ ಫೇಸ್ ವಿದ್ಯುತ್ ಪೂರೈಸುವುದು ಸೂಕ್ತ ಎಂಬುದು ತಜ್ಞರ ಅಭಿಪ್ರಾಯವಾಗಿದೆ. ಈ ನಿಟ್ಟಿನಲ್ಲಿ ಕಾಡಂಚಿನ ಗ್ರಾಮಗಳಿಗೆ ರಾತ್ರಿಯ ಹೊತ್ತು ತ್ರೀ ಫೇಸ್ ವಿದ್ಯುತ್ ಪೂರೈಸದಂತೆ ಇಂಧನ ಇಲಾಖೆಗೆ ನಿರ್ದೇಶನ ನೀಡುವಂತೆ ಇಂಧನ ಸಚಿವರಲ್ಲಿ ಕೋರಿದ್ದಾರೆ.