ದೆಹಲಿ: ಮೂರು ರಾಜ್ಯಗಳ ಜನಾದೇಶ (ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸಗಢ) ಲೋಕಸಭೆಯ ಹ್ಯಾಟ್ರಿಕ್ ಗೆಲುವಿನ ಗ್ಯಾರಂಟಿ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಆಶಯ ವ್ಯಕ್ತಪಡಿಸಿದ್ದಾರೆ.
ನಾಲ್ಕು ರಾಜ್ಯಗಳ ಪೈಕಿ ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಸಾಧಿಸಿದೆ. ಬಿಜೆಪಿ ಗೆಲುವಿನ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಕಾರ್ಯಕರ್ತರು ಮತ್ತು ದೇಶದ ಜನತೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಿದರು.
ಇದು ರೈತರು, ಆದಿವಾಸಿಗಳು, ಮಹಿಳೆಯರ ಗೆಲುವು. ಈ ಗೆಲುವಿನಲ್ಲಿ ಮಹಿಳೆಯರು, ಯುವಕರು ತಮ್ಮ ಗೆಲುವು ನೋಡುತ್ತಿದ್ದಾರೆ. 2047 ಭಾರತವನ್ನು ವಿಕ್ಸಿತ್ ದೇಶ ಮಾಡುವ ಗುರಿಗೆ ಶಕ್ತಿ ನೀಡಲಿದೆ. ಈ ಚುನಾವಣೆಯಲ್ಲಿ ನಾರಿ ಶಕ್ತಿ ದೊಡ್ಡದಾಗಿ ಹೊರಹೊಮ್ಮಿದೆ. ದೇಶದ ಮಹಿಳೆಯರು ಸುರಕ್ಷಾ ಕವಚವಾಗಿ ನಿಂತರೆ, ಯಾವುದೇ ಕಾರಣಕ್ಕೂ ಹಾನಿಯಾಗಲು ಬಿಡುವುದಿಲ್ಲ. ಬಿಜೆಪಿ ಸರ್ಕಾರದಲ್ಲಿ ಮಹಿಳೆಯರು ಸಕ್ರಿಯವಾಗಿ ಭಾಗಿಯಾಗಿದ್ದಾರೆ. ನಮಗೆ ರಕ್ಷಾ ಕವಚವಾಗಿದ್ದಾರೆ ಎಂದು ಮಹಿಳೆಯರಿಗೆ ಪ್ರಧಾನಿ ಕೃತಜ್ಞತೆ ಸಲ್ಲಿಸಿದ್ದಾರೆ.
ನಾನು ಇಂದು ವಿನ್ರಮವಾಗಿ ದೇಶದ ಜನರಿಗೆ ಹೇಳುತ್ತಿದ್ದೇನೆ. ನಾವು ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸಲಿದ್ದೇವೆ. ಇದು ಮೋದಿ ಗ್ಯಾರಂಟಿ. ಗ್ಯಾರಂಟಿ ಪೂರ್ಣ ಮಾಡುವುದು ಮೋದಿ ಗ್ಯಾರಂಟಿ. ದೇಶದ ಯುವಕರು ಅಭಿವೃದ್ಧಿಯನ್ನು ಮಾತ್ರ ಕೇಳುತ್ತಾರೆ. ಇದಕ್ಕೆ ವಿರುದ್ಧವಾಗಿ ಕೆಲಸ ಮಾಡಿದವರು ಅಧಿಕಾರದಿಂದ ಹೊರಗಿದ್ದಾರೆ. ಪೇಪರ್ ಲೀಕ್ ಸೇರಿದಂತೆ ಹಲವು ಹರಗಣ ಮಾಡಿದ ಪಕ್ಷಗಳು ಅಧಿಕಾರದಿಂದ ಹೊರಗಿವೆ. ದೇಶದ ಯುವಕರಲ್ಲಿ ಬಿಜೆಪಿ ಮೇಲೆ ಭರವಸೆ ಹೆಚ್ಚಿದೆ. ನಮ್ಮ ಆಕಾಂಕ್ಷೆಗಳನ್ನು ಬಿಜೆಪಿ ಪೂರ್ಣ ಮಾಡಬಲ್ಲದು ಎಂದು ಯುವಕರು ನಂಬಿದ್ದಾರೆ ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ.