ತುಮಕೂರು: ಜಿಲ್ಲೆಯ ಪಾವಗಡ ತಾಲೂಕು ಆಸ್ಪತ್ರೆಯಲ್ಲಿ ವಿವಿಧ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮೂವರು ಮಹಿಳೆಯರು ಐದು ದಿನಗಳ ಅವಧಿಯಲ್ಲಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಫೆಬ್ರವರಿ 22ರಂದು ಸಂತಾನಹರಣ, ಗರ್ಭಕೋಶದ ಚಿಕಿತ್ಸೆ ಹಾಗೂ ಸಿಸರಿಯನ್ಗೆ ಒಳಗಾಗಿದ್ದ ಮೂವರು ಮಹಿಳೆಯರು ಐದು ದಿನಗಳ ಅವಧಿಯಲ್ಲಿ ಮೃತಪಟ್ಟಿದ್ದಾರೆ. ಫೆ.22ರಂದು 7 ಮಹಿಳೆಯರಿಗೆ ಆಪರೇಷನ್ ಮಾಡಿದ್ದರು.
ಹೆರಿಗೆ ಸೇರಿದಂತೆ ವೈದ್ಯರು ವಿವಿಧ ಆಪರೇಷನ್ ಮಾಡಿದ್ದಾರೆ. 7 ಮಹಿಳೆಯರ ಪೈಕಿ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಸಂತಾನ ಹರಣ ಚಿಕಿತ್ಸೆಗೆ ಒಳಗಾಗಿದ್ದ ವೀರ್ಲಗೊಂದಿ ಗ್ರಾಮದ 30 ವರ್ಷದ ಅನಿತಾ, ಸಂತಾನ ಹರಣ ಚಿಕಿತ್ಸೆ ನಡೆದ ದಿನವೇ ಸಾನ್ನಪ್ಪಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
ರಾಜವಂತಿ ಮೂಲದ ಅಂಜಲಿಗೆ ಸಿಸರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಹೆರಿಗೆ ಬಳಿಕ ಅಂಜಲಿ ಸ್ಥಿತಿ ಗಂಭೀರವಾಗಿತ್ತು. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಲಿತ್ಸೆ ಫಲಕಾರಿಯಾಗದೆ ಅಂಜಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಫೆ. 24 ರಂದು ಮೃತಪಟ್ಟಿದ್ದರು. ಬ್ಯಾಡನೂರು ಗ್ರಾಮದ 40 ವರ್ಷದ ನರಸಮ್ಮಗೆ ಗರ್ಭಕೋಶದ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಶಸ್ತ್ರ ಚಿಕಿತ್ಸೆ ಬಳಿಕ ನರಸಮ್ಮ ಸ್ಥಿತಿ ಗಂಭೀರವಾಗಿತ್ತು.
ಬಳಿಕ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಫೆ. 25ರಂದು ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.ಈ ಮೃತ ಮೂವರು ಫೆ. 22ರಂದು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಈ ಮೂರು ಸಾವಿಗೆ ನ್ಯಾಯ ಒದಗಿಸುವಂತೆ ಪಾವಗಡ- ಬಳ್ಳಾರಿ ರಸ್ತೆ ತಡೆದು ಮೃತ ಅಂಜಲಿ ಭಾವಚಿತ್ರ ಹಿಡಿದು ಕುಟುಂಬಸ್ಥರು ಪಾವಗಡದಲ್ಲಿ ಪ್ರತಿಭಟನೆ ಮಾಡಿದ್ದಾರೆ. ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)