ಬೆಂಗಳೂರು:- ರಾಜಧಾನಿ ಬೆಂಗಳೂರಲ್ಲಿ ಗುಡುಗು ಸಹಿತ ಮಳೆ ಆಗಲಿದ್ದು, ಕರಾವಳಿ, ಮಲೆನಾಡಿನಲ್ಲಿ ವರುಣಾರ್ಭಟ ಮುಂದುವರಿದಿದೆ.
ನಿರುದ್ಯೋಗಿಗಳಿಗೆ ಬಂಪರ್ ಸುದ್ದಿ: KSRTCಯಲ್ಲಿ 3553 ಹುದ್ದೆಗಳು ಖಾಲಿ.. ಇಂದೇ ಅರ್ಜಿ ಸಲ್ಲಿಸಿ!
ಮಲೆನಾಡು ಭಾಗದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯೊಂದಿಗೆ ಚದುರಿದ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ( ಸಾಧ್ಯತೆಯಿದೆ.
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಮಂಡ್ಯ, ರಾಮನಗರ, ಮೈಸೂರು ಹಾಗೂ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು, ವಿಜಯನಗರದಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ
ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ
ಕರಾವಳಿಯ ಉತ್ತರಕನ್ನಡದಲ್ಲಿ ಧಾರಾಕಾರ ಮಳೆಯಾಗಲಿದ್ದು, ಶಾಲಾ- ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ