ತುಮಕೂರು:– KSRTC ಉಳಿಸಲು ಟಿಕೆಟ್ ದರ ಏರಿಕೆ ಅನಿವಾರ್ಯ ಎಂದು ಗುಬ್ಬಿ ಶಾಸಕ SR ಶ್ರೀನಿವಾಸ್ ಹೇಳಿದ್ದಾರೆ.
ಕಳೆದ ತ್ರೈಮಾಸಿಕದಲ್ಲಿ 295 ಕೋಟಿ ರೂ. ನಷ್ಟವಾಗಿದೆ. ಟಿಕೆಟ್ ದರ (Ticket Price) ಏರಿಸದೇ ಇದ್ದರೆ ಕೆಎಸ್ಆರ್ಟಿಸಿ (KSRTC) ಸಂಸ್ಥೆ ಉಳಿಯುವುದಿಲ್ಲ ಎಂದು ಶ್ರೀನಿವಾಸ್ ಹೇಳಿದ್ದಾರೆ.
ಸದ್ಯದಲ್ಲೇ ಕೆಎಸ್ಆರ್ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗುವುದು. ಮೊನ್ನೆ ನಿಗಮದ ಮೀಟಿಂಗ್ ಮುಗಿದಿದ್ದು 15-20% ದರ ಹೆಚ್ಚಳ ಮಾಡುವ ಪ್ರಸ್ತಾವನೆಯನ್ನು ಸಿಎಂ ಮುಂದೆ ಇಟ್ಟಿದ್ದೇವೆ ಎಂದು ಮಾಹಿತಿ ನೀಡಿದರು.
ತೈಲ ಬೆಲೆ ಏರಿಕೆ, ಹೊಸ ಬಸ್ಗಳ ಖರೀದಿಯಿಂದ ಸಂಸ್ಥೆಗೆ ಹೊರೆಯಾಗಿದೆ. ಅಲ್ಲದೇ ಈ ಬಾರಿ ಸಾರಿಗೆ ಸಂಸ್ಥೆಯ ನೌಕರರ ವೇತನ ಪರಿಷ್ಕರಣೆ ಮಾಡಲಿದ್ದೇವೆ. ಬಿಡಿ ಭಾಗಗಳ ದರ ಏರಿಕೆಯಾಗಿದೆ. ಈ ಎಲ್ಲಾ ಕಾರಣಗಳಿಂದ ಟಿಕೆಟ್ ದರ ಹೆಚ್ಚಳ ಅನಿವಾರ್ಯ ಎಂದು ಶಾಸಕರು ಸಮರ್ಥಿಸಿಕೊಂಡಿದ್ದಾರೆ.