ಬಾಲಿವುಡ್ ನ ಮತ್ತೊಂದು ಸಿನಿಮಾ ಎರಡೇ ದಿನಕ್ಕೆ ನೂರು ಕೋಟಿ ಕ್ಲಬ್ ಸೇರಿದೆ. ಸಲ್ಮಾನ್ ಖಾನ್ (Salman Khan) ನಟನೆಯ ‘ಟೈಗರ್ 3’ ಸಿನಿಮಾ ದೀಪಾವಳಿ ದಿನದಂದು ಜಗತ್ತಿನಾದ್ಯಂತ ಬಿಡುಗಡೆ ಆಗಿದೆ. ಸಿನಿಮಾ ರಿಲೀಸ್ ಗೂ ಮುನ್ನ ಸಾಕಷ್ಟು ನಿರೀಕ್ಷೆ ಮೂಡಿಸಿತ್ತು. ಹಾಗಾಗಿ ಅಡ್ವಾನ್ಸ್ ಬುಕ್ಕಿಂಗ್ ನಲ್ಲೇ (Box Office) ದಾಖಲೆ ರೀತಿಯಲ್ಲಿ ಟಿಕೆಟ್ ಗಳು ಮಾರಾಟವಾಗಿದ್ದವು. ಜೊತೆಗೆ ಹಬ್ಬವೂ ಕೂಡಿ ಬಂದಿದ್ದರಿಂದ ಮೊದಲ ದಿನದ ಗಳಿಕೆ ಎಷ್ಟಾಗಿರಬಹುದು ಎನ್ನುವ ಚರ್ಚೆ ಶುರುವಾಗಿತ್ತು.
ನಿರ್ಮಾಣ ಸಂಸ್ಥೆಯೇ ಪೋಸ್ಟರ್ ವೊಂದನ್ನು ಹಂಚಿಕೊಂಡಿದ್ದು, ಸಿನಿಮಾದ ಮೊದಲ ದಿನವೇ ಜಗತ್ತಿನಾದ್ಯಂತ 94 ಕೋಟಿ ರೂಪಾಯಿ ಕಮಾಯಿ ಮಾಡಿದೆ. ನಿನ್ನೆ ಕೂಡ ಸಾಕಷ್ಟು ಹಣ ಬಾಕ್ಸ್ ಆಫೀಸಿಗೆ ಹರಿದು ಬಂದಿದೆ. ಹಾಗಾಗಿ ಎರಡು ದಿನದಲ್ಲಿ ಸಿನಿಮಾ ನೂರು ಕೋಟಿ ಕ್ಲಬ್ ಸೇರಿದಂತಾಗಿದೆ.