ಅಮರಾವತಿ: ತಿರುಪತಿ ದೇವಸ್ಥಾನದಲ್ಲಿ ಲಡ್ಡು ತಯಾರಿಕೆಗೆ ತುಪ್ಪದ ಮಾದರಿ ಸಂಗ್ರಹಿಸಿ ಪ್ರಮಾಣಿಕರಿಸಿದ ಬಳಿಕವೇ ತುಪ್ಪದ ಬಳಕೆ ಮಾಡಲಾಗುತ್ತದೆ ಎಂದು ವೈಎಸ್ಆರ್ಪಿ ಮುಖ್ಯಸ್ಥ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.
ತಿರುಪತಿ ಲಡ್ಡು ವಿಷಯದಲ್ಲಿ ನಡೆಯುತ್ತಿರುವ ವಿವಾದದ (Tirupati Laddu Row) ವಿಚಾರವಾಗಿ ಅವರು ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಪ್ರಸಾದದ ಅರ್ಹತೆಯ ಮಾನದಂಡ ದಶಕಗಳಿಂದ ಬದಲಾಗಿಲ್ಲ. ಪೂರೈಕೆದಾರರು ಎನ್ಎಬಿಎಲ್ ಪ್ರಮಾಣಪತ್ರ ಮತ್ತು ಉತ್ಪನ್ನ ಗುಣಮಟ್ಟದ ಪ್ರಮಾಣಪತ್ರವನ್ನು ನೀಡಬೇಕು. ಅದಾದ ಬಳಿಕ ಟಿಟಿಡಿ (TTD) ತುಪ್ಪದಿಂದ ಮಾದರಿಗಳನ್ನು ಸಂಗ್ರಹಿಸುತ್ತದೆ. ಬಳಿಕ ಪರಿಶೀಲಿಸಿದ ಉತ್ಪನ್ನಗಳನ್ನು ಮಾತ್ರ ಬಳಸಲಾಗುತ್ತದೆ ಎಂದು ಹೇಳಿದ್ದಾರೆ.
ದೇವಾಲಯಕ್ಕೆ ಲಡ್ಡು ತಯಾರಿಕೆಗಾಗಿ ಸಾಮಗ್ರಿಗಳನ್ನು ಒದಗಿಸಲು ಪ್ರತಿ ಆರು ತಿಂಗಳಿಗೊಮ್ಮೆ ಟೆಂಡರ್ ಪ್ರಕ್ರಿಯೆ ನಡೆಯುತ್ತದೆ. ಈ ವೇಳೆ ಅಗತ್ಯ ದಾಖಲೆಗಳನ್ನು ಹಾಗೂ ಗುಣಮಟ್ಟದ ಪ್ರಮಾಣ ಪತ್ರವನ್ನು ಒದಗಿಸಿ ಟೆಂಡರ್ ಪಡೆಯಬೇಕು. ನಮ್ಮ ಆಡಳಿತದಲ್ಲಿ ನಾವು 18 ಬಾರಿ ಉತ್ಪನ್ನಗಳನ್ನು ತಿರಸ್ಕರಿಸಿದ್ದೇವೆ ಎಂದು ಅವರು ಹೇಳಿದ್ದಾರೆ.