ಬಳ್ಳಾರಿ:- ತಿರುಪತಿ ಕಾಲ್ತುಳಿತದಲ್ಲಿ ಬಳ್ಳಾರಿ ಮೂಲದ ಮಹಿಳೆ ದುರ್ಮರಣ ಹೊಂದಿದ್ದಾರೆ.
ವೈಕುಂಠ ಏಕಾದಶಿಗೂ ಮುನ್ನವೇ ತಿರುಪತಿಯಲ್ಲಿ ಭಾರೀ ದುರಂತ ಸಂಭವಿಸಿದೆ. ಕಾಲ್ತುಳಿತಕ್ಕೆ ಸಿಲುಕಿ 7 ಮಂದಿ ಸಾವನ್ನಪ್ಪಿದ್ದು, 60ಕ್ಕೂ ಅಧಿಕ ಭಕ್ತರು ಅಸ್ವಸ್ಥಗೊಂಡಿದ್ದಾರೆ.
ಘಟನೆಯಲ್ಲಿ ಬಳ್ಳಾರಿ ಮೂಲದ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಮೂವರು ಮಹಿಳೆಯರು ಸೇರಿ 7 ಮಂದಿ ಭಕ್ತರು ಮೃತಪಟ್ಟಿದ್ದಾರೆ. ದುರಂತದಲ್ಲಿ ಬಳ್ಳಾರಿ ಮೂಲದ ಮಹಿಳೆ ನಿರ್ಮಲ ಕೂಡ ಸಾವನ್ನಪ್ಪಿದ್ದಾರೆ. ಇನ್ನು ಗಾಯಾಳುಗಳಿಗೆ ರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಮೃತರನ್ನು ವೈಜಾಗ್ನ ರಜನಿ , ವೈಜಾಗ್ನ ಲಾವಣ್, ವೈಜಾಗ್ನ ಶಾಂತಿ (30), ಸೇಲಂನ ಮಲ್ಲೀಕಾ (49) ಹಾಗೂ ನರಸಿಪಟ್ಟಣದ ನಾಯ್ಡು ಬಾಬು (59) ಎಂದು ಗುರುತಿಸಲಾಗಿದೆ.